ಬೆಂಗಳೂರು: ‘ಬಿಗ್ ಬಾಸ್ ಕನ್ನಡ ಸೀಸನ್ 12’ ರಿಯಾಲಿಟಿ ಶೋ ಪ್ರೋಮೋ ಹಾಗೂ ಪ್ರಸಾರಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಈ ಬಾರಿ ಕಿಚ್ಚ ಸುದೀಪ್ ಅವರು ಸೆಪ್ಟೆಂಬರ್ 2ರಂದು ಬರ್ತ್‌ಡೇ ಆಚರಿಸಿಕೊಳ್ಳುತ್ತಿದ್ದಾರೆ. ಈ ದಿನದಂದು ಬಿಗ್ ಬಾಸ್ ಪ್ರೋಮೋ ಬಿಡುಗಡೆ ಕಾಣಲಿದೆ ಎಂದು ಹೇಳಲಾಗುತ್ತಿದೆ. ಸೆಪ್ಟೆಂಬರ್ 28ರಂದು ಬಿಗ್ ಬಾಸ್ ಗ್ರಾಂಡ್ ಓಪನಿಂಗ್ ನಡೆಯಲಿದೆ ಎನ್ನಲಾಗಿದೆ. 29ರಿಂದ ದೊಡ್ಮನೆ ಆಟ ಶುರುವಾಗಲಿದೆ.
ಈ ಬಾರಿ ಬಿಗ್ ಬಾಸ್ನಲ್ಲಿ ಜನ ಸಾಮಾನ್ಯರು ಕೂಡ ಸ್ಪರ್ಧಿಸಬಹುದು ಎಂಬ ಆಯ್ಕೆಯನ್ನು ಈ ಹಿಂದೆ ನೀಡಲಾಗಿತ್ತು. ಅದನ್ನು ಈ ಬಾರಿ ಕೊಡಲಾಗುತ್ತದೆಯೇ ಅಥವಾ ಇಲ್ಲವೇ ಎನ್ನುವ ಪ್ರಶ್ನೆ ಅಭಿಮಾನಿಗಳಿಗೆ ಮೂಡಿದೆ. ಪ್ರೋಮೋದಲ್ಲಿ ಈ ಬಗ್ಗೆ ಮಾಹಿತಿ ಸಿಗೋ ಸಾಧ್ಯತೆ ಇದೆ.