ಪ್ಯಾರಿಸ್: ಎರಡು ಬಾರಿ ಒಲಿಂಪಿಕ್ ಪದಕ ವಿಜೇತೆ ಪಿ.ವಿ. ಸಿಂಧು ಇಂದು (ಮಂಗಳವಾರ) ಪ್ಯಾರಿಸ್‌ನಲ್ಲಿ ನಡೆಯುತ್ತಿರುವ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ 2025ರಲ್ಲಿ ತನ್ನ ಅಭಿಯಾನವನ್ನು ಆರಂಭಿಸಿದ್ದಾರೆ. ಮೊದಲ ಪಂದ್ಯದಲ್ಲಿ ಅವರು ಬುಲ್ಗೇರಿಯಾದ ಕಲೋಯಾನಾ ನಲ್ಬಾಂಟೋವಾ ವಿರುದ್ಧ ಕಣಕ್ಕಿಳಿದಿದ್ದಾರೆ.

ಮಹಿಳಾ ಸಿಂಗಲ್ಸ್‌ನಲ್ಲಿ ಭಾರತದ ಏಕೈಕ ಪ್ರತಿನಿಧಿಯಾಗಿರುವ ಸಿಂಧು ಪ್ರಸ್ತುತ ವಿಶ್ವ ಶ್ರೇಯಾಂಕದಲ್ಲಿ 15ನೇ ಸ್ಥಾನದಲ್ಲಿದ್ದಾರೆ. ಈ ಸೀಸನ್‌ನಲ್ಲಿ ಅವರಿಗೆ ನಿರೀಕ್ಷಿತ ಮಟ್ಟದ ಫಾರ್ಮ್ ಸಿಕ್ಕಿಲ್ಲ. ಜನವರಿಯಲ್ಲಿ ನಡೆದ ಇಂಡಿಯಾ ಓಪನ್‌ನಲ್ಲಿ ಕ್ವಾರ್ಟರ್ ಫೈನಲ್ ತಲುಪಿದುದೇ ಇವರ ಉತ್ತಮ ಸಾಧನೆ.
ಇತ್ತ, ಭಾರತದ ಲಕ್ಷ್ಯ ಸೇನ್ ಮೊದಲ ಸುತ್ತಿನಲ್ಲಿ ಚೀನಾದ ಶ್ರೇಷ್ಟ ಶಟ್ಲರ್ ಶಿ ಯು ಕ್ವಿ ವಿರುದ್ಧ ಸೋಲುಂಡು ಟೂರ್ನಿಯಿಂದ ಹೊರಬಿದ್ದಿದ್ದಾರೆ.
