ಜಮ್ಮು ಕಾಶ್ಮೀರ ವೈಷ್ಣೋದೇವಿ ಯಾತ್ರೆ ಮಾರ್ಗದಲ್ಲಿ ಭೂಕುಸಿತ: ಮೃತರ ಸಂಖ್ಯೆ 30ಕ್ಕೆ ಏರಿಕೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ತ್ರಿಕೂಟ ಬೆಟ್ಟಗಳಲ್ಲಿರುವ ಮಾತಾ ವೈಷ್ಣೋದೇವಿ ದೇವಸ್ಥಾನಕ್ಕೆ ಹೋಗುವ ದಾರಿಯಲ್ಲಿ ಮಂಗಳವಾರ(ಆ.26) ಸಂಭವಿಸಿದ್ದ ಭೂಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ.

ಮಾತಾ ವೈಷ್ಣೋ ದೇವಿ ದೇಗುಲಕ್ಕೆ ತೆರಳುವ ಮಾರ್ಗದಲ್ಲಿ ಅರ್ಧಕುವರಿಯ ಇಂದ್ರಪ್ರಸ್ಥ ಭೋಜನಾಲಯದ ಬಳಿ ಮಧ್ಯಾಹ್ನ 3 ಗಂಟೆ ಸುಮಾರಿಗೆ ಭೂಕುಸಿತ ಸಂಭವಿಸಿತ್ತು. ಅವಶೇಷಗಳಡಿ ಹತ್ತಾರು ಮಂದಿ ಸಿಲುಕಿದ್ದರು. ನಿರಂತರ ಮಳೆಯಿಂದಾಗಿ ಜಮ್ಮು ಮತ್ತು ಕಾಶ್ಮೀರದ ಇತರ ಪ್ರದೇಶಗಳಲ್ಲಿಯೂ ಹಾನಿಯುಂಟಾಗಿದೆ.

ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝

ವಿದ್ಯುತ್ ಕಂಬಗಳು ಮತ್ತು ಮೊಬೈಲ್ ಟವರ್‌ಗಳಿಗೆ ಹಾನಿಯಾಗಿರುವುದರಿಂದ ದೂರಸಂಪರ್ಕ ಸೇವೆಗಳು ಸ್ಥಗಿತಗೊಂಡಿವೆ. ಜಮ್ಮು-ಶ್ರೀನಗರ ಮತ್ತು ಕಿಶ್ತ್ವಾರ್-ದೋಡಾ ರಾಷ್ಟ್ರೀಯ ಹೆದ್ದಾರಿಗಳು ಮುಚ್ಚಲ್ಪಟ್ಟಿವೆ. ಅನೇಕ ಪರ್ವತ ರಸ್ತೆಗಳು ಭೂಕುಸಿತ ಮತ್ತು ಹಠಾತ್ ಪ್ರವಾಹದಿಂದ ಹಾನಿಗೊಳಗಾಗಿವೆ.

JAMMU_KASHMIRA

ಸದ್ಯ, ಗಾಯಗೊಂಡ ಯಾತ್ರಿಕರಿಗೆ ಕತ್ರಾ ಮತ್ತು ಜಮ್ಮುವಿನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಂಬಂಧಿಕರ ಬಗ್ಗೆ ಮಾಹಿತಿ ಪಡೆಯಲು ಆಸ್ಪತ್ರೆಗಳು ಮತ್ತು ಮೂಲ ಶಿಬಿರಗಳಲ್ಲಿ ಹೆಚ್ಚಿನ ಸಂಖ್ಯೆಯ ಜನರು ಸೇರುತ್ತಿದ್ದಾರೆ. ಭಾರತೀಯ ಸೇನೆ, ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳ ಮೂರು ತುಕಡಿಗಳು ಕತ್ರಾ, ಠಾಕೂರ್ ಕೋಟ್ ಮತ್ತು ಜೌರಿಯನ್ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ.

ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಲಿಂಕ್ ಬಳಸಿಕೊಳ್ಳಿ👇

ಈ ಕುರಿತು ತುರ್ತು ಸಭೆ ನಡೆಸಿದ ಸಿಎಂ ಒಮರ್ ಅಬ್ದುಲ್ಲಾ ಅವರು, “ಎಲ್ಲ ಜಿಲ್ಲಾಧಿಕಾರಿಗಳಿಗೆ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಮತ್ತು ಸಂತ್ರಸ್ತ ಕುಟುಂಬಗಳಿಗೆ ಆಹಾರ, ನೀರು ಮತ್ತು ಔಷಧಿಗಳನ್ನು ಸಕಾಲಿಕವಾಗಿ ಪೂರೈಸಬೇಕು” ಎಂದು ಸೂಚನೆ ನೀಡಿದ್ದಾರೆ.

error: Content is protected !!