ಲಕ್ನೋ: ಉತ್ತರ ಪ್ರದೇಶದಲ್ಲಿ ಪೊಲೀಸ್ ಕಾನ್‌ಸ್ಟೇಬಲ್‌ವೊಬ್ಬರು ತಮ್ಮ ಪತ್ನಿಗೆ ಬೆಂಕಿ ಹಚ್ಚಿರುವ ಪ್ರಕರಣ ಬೆಳಕಿಗೆ ಬಂದಿದೆ.
ವೃತ್ತಿಯಲ್ಲಿ ನರ್ಸ್ ಆಗಿರುವ ಪಾರುಲ್(32) ಗಂಭೀರ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.
ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
ಅಮ್ರೋಹಾ ಜಿಲ್ಲೆಯ ಪೊಲೀಸ್ ಕಾನ್‌ಸ್ಟೇಬಲ್ ತಮ್ಮ ಪತ್ನಿಗೆ ಬೆಂಕಿ ಹಚ್ಚಿರುವ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಕಾನ್‌ಸ್ಟೇಬಲ್ ಸೇರಿದಂತೆ ಒಂದೇ ಕುಟುಂಬದ ಆರು ಸದಸ್ಯರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಉತ್ತರ ಪ್ರದೇಶ ಪೊಲೀಸ್ ಇಲಾಖೆಯಲ್ಲಿ ಕಾನ್‌ಸ್ಟೇಬಲ್ ಆಗಿರುವ ಪಾರುಲ್ ಅವರ ಪತಿ ದೇವೇಂದ್ರ ಇತ್ತೀಚೆಗೆ ರಾಂಪುರದಿಂದ ಬರೇಲಿಗೆ ವರ್ಗಾವಣೆಗೊಂಡು ರಜೆಯ ಮೇಲೆ ಮನೆಯಲ್ಲಿದ್ದರು. ವರದಕ್ಷಿಣೆ ಕಿರುಕುಳ ನೀಡಿ ಆಕೆಗೆ ಬೆಂಕಿ ಹಚ್ಚಿ, ಜೀವಂತವಾಗಿ ಸುಟ್ಟುಹಾಕಲು ಯತ್ನಿಸಿದ್ದಾರೆ ಎಂದು ಹೇಳಲಾಗಿದೆ.
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಲಿಂಕ್ ಬಳಸಿಕೊಳ್ಳಿ👇
ಪಾರುಲ್ ಸಹೋದರ ದೂರು ದಾಖಲಿಸಿದ್ದು, ಆಕೆಯ ಪತಿ ದೇವೇಂದ್ರ, ಆತನ ತಾಯಿ ಮತ್ತು ಸೋನು, ಗಜೇಶ್, ಜಿತೇಂದ್ರ, ಸಂತೋಷ್ ಎಂಬ ನಾಲ್ವರು ಸಂಬಂಧಿಕರ ವಿರುದ್ಧ ಆರೋಪ ಹೊರಿಸಲಾಗಿದೆ. ಕೌಟುಂಬಿಕ ಹಿಂಸೆ ಮತ್ತು ಕೊಲೆಯತ್ನದ ಗಂಭೀರ ಆರೋಪದ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.