ವೇಶ್ಯಾವಾಟಿಕೆ ದಂಧೆ : ಇಬ್ಬರು ಆರೋಪಿಗಳ ಬಂಧನ

ಮೂಡುಬಿದಿರೆ : ಮೂಡಬಿದಿರೆಯ ಮಾರ್ಪಾಡಿ ಗ್ರಾಮದ ಆಳ್ವಾಸ್ ಆಸ್ಪತ್ರೆ ಕಡೆಗೆ ಹೋಗುವ ರಸ್ತೆಯಲ್ಲಿರುವ ಮಹಡಿ ಕಟ್ಟಡದ ರೂಂ ಒಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಕೇಂದ್ರಕ್ಕೆ ಪೊಲೀಸ್ ಇನ್ ಸೆಕ್ಟರ್ ಸಂದೇಶ್ ಪಿ.ಜಿ. ದಾಳಿ ನಡೆಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಬ್ಬರನ್ನು ಬಂಧಿಸಿದ್ದಾರೆ.

ಮೂಡಬಿದರೆ ತಾಲೂಕು , ಮಾರ್ಪಾಡಿ ಗ್ರಾಮದ ನಿವಾಸಿ ರಾಜೇಶ್ ಬೋವಿ (31 ವರ್ಷ), ಬೆಳ್ತಂಗಡಿ ತಾಲೂಕು ನಾರಾವಿ ನಿವಾಸಿ ಭರತ್ ಜೈನ್ ಬಂಧಿತ ಆರೋಪಿಗಳು.

ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಲಿಂಕ್ ಬಳಸಿಕೊಳ್ಳಿ👇

ಭರತ್ ಜೈನ್ ಸದ್ರಿ ಸಂತ್ರಸ್ತ ಮಹಿಳೆಯನ್ನು ಮುಂದಿಟ್ಟುಕೊಂಡು ಗ್ರಾಹಕರಿಗೆ ತೋರಿಸಿ ವೇಶ್ಯಾವಾಟಿಕೆ ನಡೆಸುತ್ತಿರುವುದಾಗಿ ತಿಳಿದು ಬಂದಿರುತ್ತದೆ. ಮಂಗಳವಾರ(ಆ.26)ದಂದು ರಾತ್ರಿ 8.00 ಗಂಟೆಗೆ ಈ ಕಾರ್ಯಚರಣೆ ನಡೆದಿದೆ. ಸಂತ್ರಸ್ತ ಮಹಿಳೆಯನ್ನು ಪೊಲೀಸರು ರಕ್ಷಿಸಿದ್ದಾರೆ. ಆರೋಪಿ ಭರತ್ ಜೈನ್ ವಿರುದ್ಧ ಕಾರ್ಕಳ ನಗರ ಪೊಲೀಸ್ ಠಾಣೆ ಸಹಿತ ವಿವಿಧ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡುಬಿದಿರೆ ಠಾಣೆಯಲ್ಲಿ ಆರೋಪಿಗಳ‌ ವಿರುದ್ಧ ಪ್ರಕರಣ ದಾಖಲಾಗಿದೆ.

ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝

error: Content is protected !!