ಮಹಾರಾಷ್ಟ್ರ: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಿರಾರ್‌ನಲ್ಲಿ ನಾಲ್ಕು ಅಂತಸ್ತಿನ ಹಳೆಯ ಕಟ್ಟಡವೊಂದು ಮಂಗಳವಾರ (ಆ.27) ಮಧ್ಯರಾತ್ರಿ ಕುಸಿದು ಬಿದ್ದು ಒಂದು ವರ್ಷದ ಮಗು ಸೇರಿದಂತೆ 15 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದು ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು ಇನ್ನೂ ಕೆಲವರು ನಾಪತ್ತೆಯಾಗಿದ್ದು ರಕ್ಷಣಾ ತಂಡ ಅವಶೇಷಗಳಡಿ ಶೋಧ ಕಾರ್ಯ ನಡೆಸುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ವಿಜಯ್ ನಗರದಲ್ಲಿರುವ ರಮಾಬಾಯಿ ಅಪಾರ್ಟ್‌ಮೆಂಟ್‌ನ ಒಂದು ಭಾಗ ಕುಸಿದು ಈ ದುರಂತ ಸಂಭವಿಸಿದೆ ಎನ್ನಲಾಗಿದೆ ಈ ವೇಳೆ ಆರೋಹಿ ಜೋಯಲ್ ಮತ್ತು ಓಂಕಾರ್ ಜೋಯಲ್ ದಂಪತಿಯ ಒಂದು ವರ್ಷದ ಮಗಳಾದ ಉತ್ಕರ್ಷ ಜೋಯಲ್ ನ ಹುಟ್ಟುಹಬ್ಬವಾಗಿದ್ದರಿಂದ ದಂಪತಿ ಮಂಗಳವಾರ ಮಧ್ಯರಾತ್ರಿ ಸುಮಾರು 12:05 ರ ವೇಳೆಗೆ ಮಗಳ ಮೊದಲ ವರ್ಷದ ಹುಟ್ಟು ಹಬ್ಬವನ್ನು ಆಚರಿಸುತ್ತಿದ್ದರು. ಈ ವೇಳೆ ಏಕಾಏಕಿ ಕಟ್ಟಡ ಕುಸಿದು ಬಿದ್ದಿದೆ ಘಟನೆಯಲ್ಲಿ ಒಂದು ವರ್ಷದ ಮಗು, ತಾಯಿ ಸೇರಿದಂತೆ ಹದಿನೈದು ಮಂದಿ ಜೀವ ಕಳೆದುಕೊಂಡಿದ್ದು ತಂದೆ ಓಂಕಾರ್ ಜೋಯಲ್ ನಾಪತ್ತೆಯಾಗಿದ್ದಾರೆ.
ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
ಘಟನೆ ನಡೆದು 30 ಗಂಟೆಗಳು ಕಳೆದರೂ ಇನ್ನೂ ರಕ್ಷಣಾ ಕಾರ್ಯ ಮುಂದುವರೆದಿದೆ ಎಂದು ಸ್ಥಳದಲ್ಲಿ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (NDRF) ಮತ್ತು ಅಗ್ನಿಶಾಮಕ ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.