ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘ ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ನಡೆದ ಅಂತರ್ ಜಿಲ್ಲಾ ಮಟ್ಟದ ಬಂಟ ಕ್ರೀಡೋತ್ಸವ ಸ್ಫರ್ಧೆಯಲ್ಲಿ ಸುರತ್ಕಲ್ ಬಂಟರ ಸಂಘದ ಮಹಿಳಾ ಸದಸ್ಯರು ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ದ್ವಿತೀಯ ಹಾಗೂ ತ್ರೋಬಾಲ್ ಪಂದ್ಯಾಕೂಟದಲ್ಲಿ ದ್ವಿತೀಯ ಪ್ರಶಸ್ತಿ ಗಳಿಸಿದರು.
ಪ್ರಶಸ್ತಿಯನ್ನು ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ, ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನದ ಟ್ರಸ್ಟಿ ಅಜಿತ್ ಕುಮಾರ್ ರೈ ಮಾಲಾಡಿ, ಗಣೇಶ್ ಶೆಟ್ಟಿ, ಸುಂದರ ಶೆಟ್ಟಿ, ರತ್ನಾಕರ ಶೆಟ್ಟಿ, ರವೀಂದ್ರನಾಥ ಶೆಟ್ಟಿ, ಉದಯಕುಮಾರ್ ಶೆಟ್ಟಿ, ಜಯಶೀಲ ಅಡ್ಯಂತಾಯ, ವಸಂತ ಶೆಟ್ಟಿ, ಬಾಳ ಜಗನ್ನಾಥ ಶೆಟ್ಟಿ, ಸುಬ್ಬಯ್ಯ ರೈ ಉಪಸ್ಥಿತರಿದ್ದರು.
ಪ್ರಶಸ್ತಿಯನ್ನು ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರು ಹಾಗೂ ಮಹಿಳಾ ಕ್ರೀಡಾಕಾರ್ಯದರ್ಶಿ ಬಬಿತಾ ಶೆಟ್ಟಿ ಸ್ವೀಕರಿಸಿದರು. ಸಂಘದ ಉಪಾಧ್ಯಕ್ಷ ಪ್ರವೀಣ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ, ಕ್ರೀಡಾಕಾರ್ಯದರ್ಶಿ ಪುಷ್ಪರಾಜ ಶೆಟ್ಟಿ ಮಧ್ಯ, ನಿಕಟಪೂರ್ವ ಕ್ರೀಡಾ ಕಾರ್ಯದರ್ಶಿ ಶಿಶೀರ್ ಶೆಟ್ಟಿ, ಮಾಜಿ ಕ್ರೀಡಾ ಕಾರ್ಯದರ್ಶಿ ಗುಣಶೇಖರ ಶೆಟ್ಟಿ, ಸಂಘದ ಪದಾಧಿಕಾರಿಗಳು ಹಾಗೂ ಮಹಿಳಾ ವೇದಿಕೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.