ಕರಾವಳಿಯಲ್ಲಿ ಸುರಿದ ಭಾರೀ ಮಳೆಗೆ ಹಲವೆಡೆ ಹಾನಿ !

ಬಂಟ್ವಾಳ: ದ.ಕ. ಜಿಲ್ಲೆಯಾದ್ಯಂತ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ಹಾನಿಯಾಗಿದೆ.

ಈ ನಡುವೆ ಬಂಟ್ವಾಳ ಮೂಡ ನಡುಗೋಡು ಗ್ರಾಮದ ದಂಡೆ ಮಜಲು ಎಂಬಲ್ಲಿ ರಾಮಣ್ಣ ನಾಯಕ್ ಎಂಬವರ ಮನೆ ಮಳೆಯಿಂದ ತೀವ್ರ ಹಾನಿಯಾಗಿದೆ. ಸದ್ಯಕ್ಕೆ ಅವರು ಪಕ್ಕದಲ್ಲೇ ಇರುವ ಸಹೋದರನ ಮನೆಗೆ ಸ್ಥಳಾಂತರಗೊಂಡಿದ್ದಾರೆ.

ಅಮ್ಟಾಡಿ ಗ್ರಾಮದ ಪೆದಮಲೆ ಎಂಬಲ್ಲಿ ಬಂಟ್ವಾಳ- ಸಿದ್ದಕಟ್ಟೆ ಸಂಪರ್ಕಿಸುವ ರಾಜ್ಯ ಹೆದ್ದಾರಿ ಬದಿಯಲ್ಲಿ ಮಣ್ಣು ಕುಸಿದಿದೆ. ಈ ಬಗ್ಗೆ ಪಿಡಬ್ಲ್ಯೂಡಿ ಇಲಾಖೆಗೆ ಕಂದಾಯ ಅಧಿಕಾರಿಗಳು ಮಾಹಿತಿ ರವಾನೆ ಮಾಡಿದ ಹಿನ್ನೆಲೆಯಲ್ಲಿ ಅಧಿಕಾರಿಗಳು ಸ್ಥಳ ಪರಿವೀಕ್ಷಿಸಿ ತಾತ್ಕಾಲಿಕ ಕ್ರಮ ಕೈಗೊಂಡಿದ್ದಾರೆ.

ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝

ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಲಿಂಕ್ ಬಳಸಿಕೊಳ್ಳಿ.

error: Content is protected !!