ತಿರುವನಂತಪುರಂ: ಪ್ರಯಾಗ್‌ರಾಜ್‌ನಲ್ಲಿ ಈ ಬಾರಿ ನಡೆದ ಮಹಾಕುಂಭ ಮೇಳದಲ್ಲಿ ರುದ್ರಾಕ್ಷಿ ಮಾರುತ್ತಿದ್ದ ಮೊನಾಲಿಸಾ ತಮ್ಮ ಕಣ್ಣಿನಿಂದ ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಮೂಡಿಸಿದ್ದರು. ಇದೀಗ ಮಲಯಾಳಂ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. “ನಾಗಮ್ಮ’ ಚಿತ್ರದ ಮೂಲಕ ಮಲಯಾಳಂ ಸಿನಿಮಾದಲ್ಲಿ ಮೊನಾಲಿಸಾ ಕಾಣಿಸಿಕೊಳ್ಳುತ್ತಿದ್ದಾರೆ.
ಕೊಚ್ಚಿಯಲ್ಲಿ ನಾಗಮ್ಮ ಚಿತ್ರದ ಮುಹೂರ್ತ ನಡೆದಿದ್ದು, ನಟ ಕೈಲಾಶ್ ಅವರೊಂದಿಗೆ ನಟಿಸಲಿದ್ದಾರೆ. ಪಿ. ಬಿನು ವರ್ಗೀಸ್ ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಜೀಲಿ ಜಾರ್ಜ್ ನಿರ್ಮಾಪಕರಾಗಿದ್ದಾರೆ.
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಲಿಂಕ್ ಬಳಸಿಕೊಳ್ಳಿ.
ಈ ಚಿತ್ರದಲ್ಲಿ ಮೊನಾಲಿಸಾ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳಲಿದ್ದು, ಚಿತ್ರದ ಚಿತ್ರೀಕರಣ ಸೆಪ್ಟೆಂಬರ್ ಅಂತ್ಯದ ವೇಳೆಗೆ ಪ್ರಾರಂಭವಾಗುವ ನಿರೀಕ್ಷೆಯಿದೆ.
ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
ಬಾಲಿವುಡ್‌ನಲ್ಲಿ ಸಿನಿಮಾ ಮಾಡುತ್ತಿರುವ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.