ಚಿತ್ತಾಪುರ: ಪಟ್ಟಣದಲ್ಲಿ ಬಾಲಕನೊಬ್ಬ ಇನ್ನೊಬ್ಬ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಈ ಸಂಬಂಧ ಪೋಕ್ಸೋ ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿದೆ.
ಪಟ್ಟಣದ ಲಾಡ್ಜಿಂಗ್ ಕ್ರಾಸ್ ಕಡೆಯಿಂದ ಶಹಾಬಾದ ಕಡೆಗೆ ತೆರಳುವ ರಸ್ತೆಯಲ್ಲಿರುವ ನ್ಯಾಯಾಲಯದ ಹಳೆಯ ಕಟ್ಟಡದ ಆವರಣದೊಳಗೆ ಆ.26ರಂದು ರಾತ್ರಿ ಪಟ್ಟಣದ 16 ವರ್ಷದ ಬಾಲಕನೊಬ್ಬ 14 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ.
ದೌರ್ಜನ್ಯಕ್ಕೊಳಗಾದ ಬಾಲಕ ಮನೆಗೆ ತೆರಳಿ ತನ್ನ ತಾಯಿ ಎದುರು ವಿಷಯ ತಿಳಿಸಿದ್ದಾಗ ಪ್ರಕರಣ ಬೆಳಕಿಗೆ ಬಂದಿದೆ. ದೌರ್ಜನ್ಯಕ್ಕೊಳಗಾದ ಬಾಲಕನ ತಾಯಿ ಆ.27ರಂದು ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆಪಾದಿತ ಬಾಲಕನನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ. ಚಿತ್ತಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.