ಸಮುದ್ರದ ಅಲೆಗಳ ಅಬ್ಬರಕ್ಕೆ ಮಗುಚಿ ಬಿದ್ದ ಮೀನುಗಾರರ ದೋಣಿ: ನಾಲ್ವರು ಪ್ರಾಣಾಪಾಯದಿಂದ ಪಾರು !

ಮಲ್ಪೆ: ತೊಟ್ಟಂ ಬಳಿ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ದೋಣಿಯೊಂದು ಇಂದು(ಆ.29) ಬೆಳಗ್ಗೆ ಅಲೆಗಳ ಅಬ್ಬರಕ್ಕೆ ಮಗುಚಿ ಬಿದ್ದಿದ್ದು, ದೋಣಿಯಲ್ಲಿದ್ದ ನಾಲ್ವರು ಮೀನುಗಾರರು ಅಪಾಯದಿಂದ ಪಾರಾಗಿದ್ದಾರೆ.

ಸ್ಥಳೀಯರಾದ ಜೀವನ್ ಎಂಬವರ ದೋಣಿಯಲ್ಲಿ ನಾಲ್ವರು ಮೀನುಗಾರರು ಮೀನುಗಾರಿಕೆಗೆ ತೆರಳಿದ್ದರು. ಈ ವೇಳೆ ದೋಣಿಯು ಅಲೆಗಳಿಗೆ ಸಿಲುಕಿ ಸಮುದ್ರದಲ್ಲಿ ಮಗುಚಿತ್ತೆನ್ನಲಾಗಿದೆ. ಈ ಬಗ್ಗೆ ಸ್ಥಳೀಯರು ಮುಳುಗು ತಜ್ಞ ಈಶ್ವರ ಮಲ್ಪೆ ತಂಡಕ್ಕೆ ಮಾಹಿತಿ ನೀಡಿದ್ದು, ಕೂಡಲೇ ಸ್ಥಳಕ್ಕೆ ಆಗಮಿಸಿದ ತಂಡವು ಮೀನುಗಾರರಾದ ಪ್ರವೀಣ್ ಹಾಗೂ ಉದಯ್ ಜೊತೆಯಾಗಿ ನೀರಿಗೆ ಇಳಿದು ಅಪಾಯದಲ್ಲಿದ್ದ ನಾಲ್ವರಿಗೆ ಲೈಫ್ ಜಾಕೆಟ್ ನೀಡಿ ರಕ್ಷಣೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಲಿಂಕ್ ಬಳಸಿಕೊಳ್ಳಿ.

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಸಮುದ್ರ ಪ್ರಕ್ಷುಬ್ಧಗೊಂಡಿದ್ದು ಮೀನುಗಾರಿಕೆಗೆ ತೆರಳುವ ಮೀನುಗಾರರು ಕಡ್ಡಾಯವಾಗಿ ಲೈಫ್ ಜಾಕೆಟ್ ಧರಿಸಬೇಕಾಗಿ ಈಶ್ವರ ಮಲ್ಪೆ ತಂಡ ಮೀನುಗಾರರಲ್ಲಿ ಮನವಿ ಮಾಡಿದೆ.

ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝

error: Content is protected !!