ಬೆಂಗಳೂರು: ಸೆಪ್ಟಂಬರ್ 1ರಂದು ಧರ್ಮಸ್ಥಳದಲ್ಲಿ ಧರ್ಮ ರಕ್ಷಣಾ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ ಎಂದು ಆರ್. ಅಶೋಕ್ ತಿಳಿಸಿದರು.
ಸಿಎಂ ಸಿದ್ದರಾಮಯ್ಯ ಸುತ್ತ ಇರುವ ಪ್ರಗತಿಪರರು ಧರ್ಮಸ್ಥಳ ದೇವಾಲಯವನ್ನು ಕಿತ್ತುಕೊಂಡು ಲೂಟಿ ಹೊಡೆಯಲು ಯೋಜನೆ ರೂಪಿಸಿದ್ದಾರೆ. ಹಿಂದೆ ಘಜನಿ ಮಾಡಿದಂತೆಯೇ ಕಾಂಗ್ರೆಸ್ ಸರಕಾರ ಲೂಟಿ ಮಾಡಲು ಮುಂದಾಗಿದೆ.
ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
ಮಂಜುನಾಥ ಸ್ವಾಮಿಗೆ ಕೆಟ್ಟ ಹೆಸರು ತರಲು ಎರಡು ವರ್ಷ ತಯಾರಿ ನಡೆಸಲಾಗಿದೆ. ಎಸ್‌ಐಟಿಗೆ 3-5 ಕೋಟಿ ರೂ. ಖರ್ಚಾಗಿದೆ. ಈ ಹಿನ್ನೆಲೆಯಲ್ಲಿ ಸೆ. 1ರಂದು ಧರ್ಮ ರಕ್ಷಣೆ ಸಮಾವೇಶ ಮಾಡಲಿದ್ದೇವೆ ಎಂದು ತಿಳಿಸಿದರು.
ಸದಾಶಿವ ನಗರದಲ್ಲಿ ಗುರುವಾರ(ಆ.28) ಧರ್ಮಸ್ಥಳ ವಿಚಾರಕ್ಕೆ ಸಂಬಂಧಿಸಿ ಬಿಜೆಪಿ ನಡೆಯನ್ನು ಟೀಕಿಸಿರುವ ಡಿಸಿಎಂ ಡಿ.ಕೆ. ಶಿವಕುಮಾರ್, “ಬಿಜೆಪಿಯದ್ದು ಧರ್ಮದ ಚಲೋ ಅಲ್ಲ; ಅದು ರಾಜಕೀಯದ ಚಲೋ’ ಎಂದು ವ್ಯಂಗ್ಯವಾಡಿದರು.