ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ಲೋಕಾಯುಕ್ತ ದಾಳಿ – ಓರ್ವ ಸೆರೆ

ಪುತ್ತೂರು: ಸಾರ್ವಜನಿಕರೊಬ್ಬರಿಂದ ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಲಂಚದ ಹಣದ ಸಮೇತ ಆರೋಪಿಯನ್ನು ಬಂಧಿಸಿದ ಘಟನೆ ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯ ಭೂ ಸುಧಾರಣಾ ಶಾಖೆಯಲ್ಲಿ ಗುರುವಾರ(ಆ.28)ರ ಸಂಜೆ ವೇಳೆ ನಡೆದಿದೆ.

ಸುನೀಲ್ ಲಂಚ ಸ್ವೀಕರಿಸುತ್ತಿದ್ದ ವೇಳೆ ಪೊಲಿಸರ ಬಲೆಗೆ ಬಿದ್ದ ವ್ಯಕ್ತಿ.

ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝

ಪುತ್ತೂರು ತಾಲೂಕಿನ ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯ ಭೂ ಸುಧಾರಣಾ ಶಾಖೆಯ ಎಫ್.ಡಿ.ಎ ಸುನೀಲ್ ಎಂಬಾತ ದೂರುದಾರರಿಂದ 12,000 ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಮಂಗಳೂರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಸುನೀಲ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ಪುತ್ತೂರು ತಹಶೀಲ್ದಾರ್ ಪರಾರಿಯಾಗಿದ್ದು, ಆತನಿಗಾಗಿ ಹುಡುಕಾಟ ನಡೆಸುತ್ತಿದ್ದೇವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಲಿಂಕ್ ಬಳಸಿಕೊಳ್ಳಿ.

error: Content is protected !!