ರಾಯಚೂರು: ಎಲ್.ಬಿ.ಎಸ್ ನಗರದ ಅಲಿ ಕಾಲೋನಿಯಲ್ಲಿ ಶುಕ್ರವಾರ (ಆ.29) ರಾತ್ರಿ ಬೈಕ್ ಗಳಿಗೆ ಪೆಟ್ರೊಲ್ ಸುರಿದು ಬೆಂಕಿ ಹಚ್ಚಿ ದುಷ್ಕರ್ಮಿಗಳು ವಿಕೃತಿ ಮೆರೆದಿರುವ ಘಟನೆ ಬೆಳಕಿಗೆ ಬಂದಿದೆ.
ಲಾತಿಫ್ ಅಹ್ಮದ್, ಶಬ್ಬೀರ್ ಅಹ್ಮದ್ ಅವರ ಹೊಂಡಾ ಶೈನ್ ಮತ್ತು ಹೊಂಡಾ ಆಕ್ಟಿವಾ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ರಾತ್ರಿ 11.50ರ ಸುಮಾರಿಗೆ ವ್ಯಕ್ತಿಯೊಬ್ಬ ಪೆಟ್ರೋಲ್ ಸುರಿದು ಬೆಂಕಿ ಹಚ್ಚುವ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕೂಡಲೇ ಮನೆಯವರು ಬಂದು ಬೆಂಕಿ ನಂದಿಸಿದ್ದು ಹೆಚ್ಚಿನ ಅನಾಹುತ ತಪ್ಪಿದೆ.
ಅಕ್ಕಪಕ್ಕದಲ್ಲಿ ಮನೆ ಮಾಲೀಕರ ಹಾಗೂ ಬಾಡಿಗೆದಾರರ ಇನ್ನು ಎರಡು ಬೈಕ್ ಗಳು ನಿಲ್ಲಿಸಲಾಗಿತ್ತು. ಅವುಗಳಿಗೆ ಯಾವುದೇ ಹಾನಿ ಸಂಭವಿಸಿಲ್ಲ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಮಂಗಳೂರು: ಮುಸ್ಲಿಂ ಕುಟುಂಬವೊಂದಕ್ಕೆ ಮನೆಯಲ್ಲಿ ಅಡುಗೆ ಮಾಡಿಕೊಡಲು ಮುಸ್ಲಿಂ ಮಹಿಳೆ ಬೇಕಾಗಿದ್ದಾರೆ. Salary 25000/- ಸಂಪರ್ಕ ಸಂಖ್ಯೆ: 8660040298
ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.