ತೋಕೂರಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ವೈಭವಯುತ ಗಣೇಶ ವಿಸರ್ಜನೆ !

ತೋಕೂರು : ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ತೋಕೂರು ಇಲ್ಲಿ ಗಣೇಶ ಚತುರ್ಥಿ ಹಬ್ಬದ ಮೊಸರು ಕುಡಿಕೆಯ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ದೇವಾಲಯದ ಪ್ರಧಾನ ಅರ್ಚಕರಾದ ಶ್ರೀ ಟಿ ಕೆ ಮಧುಸೂಧನ ಆಚಾರ್ ದೀಪ ಪ್ರಜ್ವಲನೆಯ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ವಿವಿಧ ಸಂಘ ಸಂಸ್ಥೆ ಹಾಗೂ ವೈಯಕ್ತಿಕ ಸಾಂಸ್ಕೃತಿಕ ಕಾರ್ಯಕ್ರಮಗಳ ನಂತರ ಗಣಪತಿ ವಿಸರ್ಜನೆ ನಡೆಯಿತು. ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಗುರುರಾಜ್ ಎಸ್. ಪೂಜಾರಿ ಅಧ್ಯಕ್ಷತೆ ವಹಿಸಿ ಗ್ರಾಮಸ್ಥರು, ಸಂಘ ಸಂಸ್ಥೆಗಳ ಸಹಕಾರದಿಂದ ಯಶಸ್ವಿಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ಅರ್ಪಿಸಿದರು, ಸಮಿತಿ ಸದಸ್ಯರಾದ ಪುರುಷೋತ್ತಮ ಕೋಟ್ಯಾನ್, ಸಂಪತ್ ಜೆ ಶೆಟ್ಟಿ ತೋಕೂರು ಗುತ್ತು , ಅಶೋಕ್ ಕುಂದರ್, ಸವಿತಾ ಶರತ್, ಸಂಘ ಸಂಸ್ಥೆಗಳ ಸದಸ್ಯರು, ಗ್ರಾಮಸ್ಥರು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಮಂಗಳೂರು: ಮುಸ್ಲಿಂ ಕುಟುಂಬವೊಂದಕ್ಕೆ ಮನೆಯಲ್ಲಿ ಅಡುಗೆ ಮಾಡಿಕೊಡಲು ಮುಸ್ಲಿಂ ಮಹಿಳೆ ಬೇಕಾಗಿದ್ದಾರೆ. Salary 25000/- ಸಂಪರ್ಕ ಸಂಖ್ಯೆ: 8660040298

error: Content is protected !!