ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀಗೆ ಅಶ್ಲೀಲ ಸಂದೇಶ: ಪ್ರಕರಣ ದಾಖಲು

ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಮತ್ತು ಅವರ ಮಗನ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು ಪ್ರಕರಣ ದಾಖಲಾಗಿದೆ.

ವಿಜಯಲಕ್ಷ್ಮೀ ಕುರಿತು ಯೂಟ್ಯೂಬ್ ಚಾನೆಲ್‌ವೊಂದು ಕಾರ್ಯಕ್ರಮ ಮಾಡಿತ್ತು. ಈ ಕಾರ್ಯಕ್ರಮದ ವೀಡಿಯೋ ಕುರಿತು ಕೆಲವು ವ್ಯಕ್ತಿಗಳು ವಿಜಯಲಕ್ಷ್ಮಿ ಬಗ್ಗೆ ಅಶ್ಲೀಲವಾಗಿ ಪ್ರತಿಕ್ರಿಯಿಸಿದ್ದರು. ಈ ಬಗ್ಗೆ ಸಾಮಾಜಿಕ ಹೋರಾಟಗಾರ ಬಿ.ಆರ್.ಭಾಸ್ಕರ್‌ ಪ್ರಸಾದ್ ಅವರು ಮಹಿಳಾ ಆಯೋಗಕ್ಕೆ ದೂರು ನೀಡಿದ್ದರು.

ಈ ದೂರಿನ ಆಧಾರದ ಮೇಲೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ನಗರ ಪೊಲೀಸ್ ಕಮಿಷನರ್ ಅವರಿಗೆ ಪತ್ರ ಬರೆದು, ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು.

ಮಂಗಳೂರು: ಮುಸ್ಲಿಂ ಕುಟುಂಬವೊಂದಕ್ಕೆ ಮನೆಯಲ್ಲಿ ಅಡುಗೆ ಮಾಡಿಕೊಡಲು ಮುಸ್ಲಿಂ ಮಹಿಳೆ ಬೇಕಾಗಿದ್ದಾರೆ. Salary 25000/- ಸಂಪರ್ಕ ಸಂಖ್ಯೆ: 8660040298

ಅಶ್ಲೀಲವಾಗಿ ಪ್ರತ್ರಿಕ್ರಿಯಿಸಿದವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

error: Content is protected !!