ಆರೋಪಿ ನಟ ದರ್ಶನ್‌ ಬಳ್ಳಾರಿ ಜೈಲು ಪಾಲಾಗ್ತಾರಾ…?

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್‌ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಕುರಿತು ಪ್ರಾಸಿಕ್ಯೂಶನ್ ಅರ್ಜಿ ಸಲ್ಲಿಸಿದ್ದಾರೆ. ಇಂದು ದರ್ಶನ್‌ ಬಳ್ಳಾರಿ ಕಾರಾಗೃಹಕ್ಕೆ ಶಿಫ್ಟ್‌ ಆಗ್ತಾರ ಎಂಬ ಭವಿಷ್ಯ ಇಂದು ನಿರ್ಧಾರವಾಗಲಿದೆ. 64ನೇ ಸಿಟಿ ಸಿವಿಲ್ ಕೋರ್ಟ್​ನಲ್ಲಿ ದರ್ಶನ್, ಜಗದೀಶ್, ಲಕ್ಷ್ಮಣ್, ನಾಗರಾಜ್, ಪ್ರದೋಶ್ ಜೈಲು ಸ್ಥಳಾಂತರ ಕುರಿತು ಆದೇಶ ಹೊರ ಬೀಳಲಿದೆ. ಜೈಲಾಧಿಕಾರಿಗಳು ಎಸ್.ಪಿ ಮೂಲಕ‌ ಆರೋಪಿಗಳನ್ನು ಬೇರೆ ಜೈಲಿಗೆ ಶಿಫ್ಟ್ ಮಾಡಲು ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.

ಜೈಲಿನ ಭದ್ರತೆ ಹಾಗೂ ಆಡಳಿತಾತ್ಮಕ ದೃಷ್ಟಿಯಿಂದ ವರ್ಗಾವಣೆ ಮಾಡುವಂತೆ ಅರ್ಜಿ ಸಲ್ಲಿಸಲಾಗಿದೆ. ಇಂದು ಆರೋಪಿಗಳ ಪರ ವಕೀಲರಿಂದ ಪರಪ್ಪನ ಅಗ್ರಹಾರ ಜೈಲಿನಿಂದ ಸ್ಥಳಾಂತರ ಮಾಡದಂತೆ ಆಕ್ಷೇಪಣೆ ಸಲ್ಲಿಸುವ ಸಾಧ್ಯತೆಯಿದೆ.

ಮಂಗಳೂರು: ಮುಸ್ಲಿಂ ಕುಟುಂಬವೊಂದಕ್ಕೆ ಮನೆಯಲ್ಲಿ ಅಡುಗೆ ಮಾಡಿಕೊಡಲು ಮುಸ್ಲಿಂ ಮಹಿಳೆ ಬೇಕಾಗಿದ್ದಾರೆ. Salary 25000/- ಸಂಪರ್ಕ ಸಂಖ್ಯೆ: 8660040298

ಈ ಮೊದಲಿನಂತೆ, ನಟ ದರ್ಶನ್ ಬಳ್ಳಾರಿ ಜೈಲಿಗೆ, ಜಗದೀಶ್ ಮತ್ತು ಲಕ್ಷ್ಮಣ್ ಶಿವಮೊಗ್ಗ ಜೈಲಿಗೆ, ನಾಗರಾಜ್‌ ಕಲಬುರಗಿ ಜೈಲಿಗೆ, ಪ್ರದೂಷ್ ಬೆಳಗಾವಿ ಜೈಲಿಗೆ ಶಿಫ್ಟ್ ಮಾಡುವಂತೆ ಹಾಗೂ ಪವಿತ್ರಾ ಗೌಡ ಮತ್ತು ಅನುಕುಮಾರ್ ಪರಪ್ಪನ ಅಗ್ರಹಾರ ಜೈಲಿನಲ್ಲೇ ಉಳಿಯುವಂತೆ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಈಗಾಗಲೇ ಪ್ರದೂಷ್ ಪರ ವಕೀಲರಿಂದ ಆಕ್ಷೇಪಣೆ ಸಲ್ಲಿಕೆಯಾಗಿದ್ದು, ಉಳಿದ ನಾಲ್ವರು ಆರೋಪಿಗಳ ಪರ ಇಂದು ಆಕ್ಷೇಪಣೆ ಸಲ್ಲಿಕೆಯಾಗಲಿದೆ. ಟ್ರಯಲ್ ಶುರುವಾದಲ್ಲಿ ಆರೋಪಿಗಳನ್ನ ಕೋರ್ಟ್‌ಗೆ ಹಾಜರುಪಡಿಸಬೇಕು. ಬಳ್ಳಾರಿ ಮತ್ತು ಇತರೆ ಜೈಲುಗಳಿಗೆ ಶಿಫ್ಟ್ ಮಾಡಿದರೆ ಕರೆ ತರುವುದು ಕಷ್ಟವಾಗುತ್ತೆ. ಆದ್ದರಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ಇರಿಸುವಂತೆ ಆಕ್ಷೇಪಣೆ ಸಲ್ಲಿಸಿ ವಾದ ಮಂಡನೆ ಮಾಡುವ ಸಾಧ್ಯತೆಯಿದೆ.

ಕಳೆದ ಬಾರಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್​ ರೌಡಿಗಳ ಜೊತೆ ಸಂಪರ್ಕ ಬೆಳಸಿ ರಾಜಾತಿಥ್ಯ ಪಡೆದುಕೊಂಡಿದ್ದರು. ಈ ಕುರಿತು ಸುಪ್ರೀಂ ಕೋರ್ಟ್‌ ಜೈಲಧಿಕಾರಿಗಳಿ ಖಡಕ್‌ ಸೂಚನೆ ನೀಡಿದ್ದು, ಈ ಹಿಂದೆ ಆಗಿದ್ದ ತಪ್ಪನ್ನು ಮರುಕಳಿಸದಂತೆ ಸೂಚನೆ ನೀಡಿದೆ.

error: Content is protected !!