ಸೌಪರ್ಣಿಕಾ ನದಿಯತ್ತ ತೆರಳಿದ ಈಜುಗಾರ್ತಿ ಮಹಿಳೆ ನಾಪತ್ತೆ !

ಕುಂದಾಪುರ: ಎರಡು ದಿನಗಳ ಹಿಂದೆ ಕೊಲ್ಲೂರಿಗೆ ಆಗಮಿಸಿದ್ದ ವಿವಾಹಿತ ಮಹಿಳೆಯೊಬ್ಬರು ಸೌಪರ್ಣಿಕಾ ನದಿಯ ಬಳಿ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ.

ಬೆಂಗಳೂರಿನ ತ್ಯಾಗರಾಜನಗರದ ನಿವಾಸಿ ಸಿ.ಆರ್. ಗೋವಿಂದರಾಜು ಅವರ ಪುತ್ರಿ ವಸುಧಾ ಚಕ್ರವರ್ತಿ (46) ನಾಪತ್ತೆಯಾದ ಮಹಿಳೆ.

ಆ.28ರಂದು ಖಾಸಗಿ ಲಾಡ್ಜ್ ಬಳಿ ತಮ್ಮ ಕಾರನ್ನು ನಿಲ್ಲಿಸಿ, ಕೊಲ್ಲೂರು ದೇವಸ್ಥಾನಕ್ಕೆ ತೆರಳಿದ್ದರು. ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ಸ್ವಲ್ಪ ಸಮಯ ಕಳೆದ ನಂತರ ಅವರು ಬೇರೆ ಬೇರೆ ದೇಗುಲಗಳಿಗೆ ತೆರಳಿ ನಂತರ ಸೌಪರ್ಣಿಕಾ ನದಿಯತ್ತ ತೆರಳಿದ್ದು, ಬಳಿಕ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಪೊಲೀಸರು ಮತ್ತು ಸ್ಥಳೀಯರು ಸೌಪರ್ಣಿಕಾ ನದಿಯ ಸುತ್ತಮುತ್ತ ವ್ಯಾಪಕ ಶೋಧ ಕಾರ್ಯ ನಡೆಸಿದರೂ ಅವರ ಯಾವುದೇ ಸುಳಿವು ಪತ್ತೆಯಾಗಿಲ್ಲ. ಅವರ ಮೊಬೈಲ್ ಫೋನ್ ಮತ್ತು ಇತರೆ ವಸ್ತುಗಳು ಕಾರಿನಲ್ಲಿ ಪತ್ತೆಯಾಗಿದ್ದು, ಇದು ಅಧಿಕಾರಿಗಳು ಅವರ ಗುರುತು ಪತ್ತೆಹಚ್ಚಲು ಮತ್ತು ಅವರ ಕುಟುಂಬಕ್ಕೆ ಮಾಹಿತಿ ನೀಡಲು ಸಹಾಯ ಮಾಡಿದೆ ಎಂದು ತಿಳಿದು ಬಂದಿದೆ.

ದೇವಸ್ಥಾನದ ಅಧಿಕಾರಿಗಳು ಸೌಪರ್ಣಿಕಾ ನದಿಯ ಬಳಿ ಅಳವಡಿಸಿರುವ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಅವರು ನದಿಯಲ್ಲಿ ಈಜುತ್ತಿರುವುದು ಕಂಡುಬಂದಿದೆ. ವಸುಧಾ ಉತ್ತಮ ಈಜುಗಾರ್ತಿ ಎಂದು ತಿಳಿದುಬಂದಿದ್ದು, ಅವರು ಬಹುದೂರದವರೆಗೆ ಈಜುತ್ತಿರುವುದು ಕಂಡುಬಂದಿದೆ. ಅವರು ದಡ ತಲುಪಲು ಯಶಸ್ವಿಯಾಗಿದ್ದಾರೆಯೇ ಅಥವಾ ಸೌಪರ್ಣಿಕಾ ನದಿಯ ಪ್ರಬಲ ಪ್ರವಾಹಕ್ಕೆ ಸಿಲುಕಿ ಕೊಚ್ಚಿಹೋಗಿದ್ದಾರೆಯೇ ಎಂದು ಇನ್ನೂ ಸ್ಪಷ್ಟತೆ ದೊರಕಿಲ್ಲ.

ಮಂಗಳೂರು: ಮುಸ್ಲಿಂ ಕುಟುಂಬವೊಂದಕ್ಕೆ ಮನೆಯಲ್ಲಿ ಅಡುಗೆ ಮಾಡಿಕೊಡಲು ಮುಸ್ಲಿಂ ಮಹಿಳೆ ಬೇಕಾಗಿದ್ದಾರೆ. Salary 25000/- ಸಂಪರ್ಕ ಸಂಖ್ಯೆ: 8660040298

ಈಶ್ವರ್ ಮಲ್ಪೆ ಸೇರಿದಂತೆ ಪರಿಣಿತ ಈಜುಗಾರರು, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ತಂಡದೊಂದಿಗೆ ನದಿಯ ವಿವಿಧ ಭಾಗಗಳಲ್ಲಿ ಶೋಧ ಕಾರ್ಯ ನಡೆಸಿದ್ದಾರೆ. ಸಂಜೆಯವರೆಗೆ ಯಾವುದೇ ಸುಳಿವು ಸಿಗದ ಕಾರಣ ಶೋಧ ಕಾರ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಅವರ ಪೋಷಕರು ಮತ್ತು ಕುಟುಂಬ ಸದಸ್ಯರು ತಕ್ಷಣ ಕೊಲ್ಲೂರಿಗೆ ಆಗಮಿಸಿದ್ದಾರೆ. ಇತ್ತೀಚೆಗೆ ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ವಸುಧಾ ಅವರು ಏಕಾಂಗಿಯಾಗಿ ಭೇಟಿ ನೀಡುತ್ತಿದ್ದರು ಎಂದು ತಿಳಿದು ಬಂದಿದೆ.

error: Content is protected !!