ಯಾದಗಿರಿ: ವಸತಿ ಶಾಲೆಯ ಶೌಚಾಲಯದಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಗಂಡು ಮಗುವಿಗೆ ಜನ್ಮ ನೀಡಿರುವ ಪ್ರಕರಣ ಸಂಬಂಧ ಪ್ರಮುಖ ಆರೋಪಿಯನ್ನು ಶಹಾಪುರ ಪೊಲೀಸರು ಬಂಧಿಸಿದ್ದಾರೆ.
ಸುರಪುರ ತಾಲೂಕಿನ ಕಕ್ಕೇರ ಗ್ರಾಮದ ಪರಮಣ್ಣ(30) ಬಂಧಿತ ಆರೋಪಿ.
ವಸತಿ ಶಾಲೆಯ ಶೌಚಾಲಯದಲ್ಲಿ ವಿದ್ಯಾರ್ಥಿನಿ ಚೀರಾಡುವ ಶಬ್ದ ಕೇಳಿ ಇತರ ವಿದ್ಯಾರ್ಥಿನಿಯರು ಓಡಿ ಬಂದು ನೋಡಿದ್ದು, ಈ ಸಂದರ್ಭ ಆಕೆ ಹೆರಿಗೆ ನೋವಿನಿಂದ ಬಳಲುತ್ತಿರುವುದು ಕಂಡು ಬಂದಿತ್ತು. ಕೂಡಲೇ ಸಹಪಾಠಿಗಳು ವಿದ್ಯಾರ್ಥಿನಿಗೆ ಹೆರಿಗೆ ಮಾಡಿಸಿದ್ದರು. ಬಳಿಕ ಶಾಲೆಯ ಪ್ರಾಂಶುಪಾಲರು, ವಾರ್ಡನ್ ಹಾಗೂ ಸ್ಟಾಫ್ ನರ್ಸ್ ಗೆ ವಿಷಯ ತಿಳಿಸಲಾಗಿತ್ತು. ನಂತರ ಬಾಲಕಿಯ ತಾಯಿಗೂ ವಿಷಯ ತಿಳಿಸಲಾಗಿದೆ ಎಂದು ತಿಳಿದು ಬಂದಿದೆ.
ನವಜಾತ ಶಿಶುವನ್ನು ಶಹಾಪುರ ಸರ್ಕಾರಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಈ ವಿಚಾರ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೂ ಮಾಹಿತಿ ತಿಳಿದು ಬಂದಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿತ್ತು.
(ಜಾಹೀರಾತು)ಮಂಗಳೂರು: ಮುಸ್ಲಿಂ ಕುಟುಂಬವೊಂದಕ್ಕೆ ಮನೆಯಲ್ಲಿ ಅಡುಗೆ ಮಾಡಿಕೊಡಲು ಮುಸ್ಲಿಂ ಮಹಿಳೆ ಬೇಕಾಗಿದ್ದಾರೆ. Salary 25000/- ಸಂಪರ್ಕ ಸಂಖ್ಯೆ: 8660040298
ವಸತಿ ಶಾಲೆಯ ಶೌಚಾಲಯದಲ್ಲಿ ಹೆರಿಗೆ ಆದರೂ ಪ್ರಾಂಶುಪಾಲರಿಗೆ, ವಾರ್ಡನ್ ಹಾಗೂ ಸ್ಟಾಪ್ ನರ್ಸ್ಗೆ ಮಾಹಿತಿ ಇಲ್ಲದ ಕಾರಣಕ್ಕೆ ಮೂವರ ಮೇಲೆ ಪ್ರಕರಣ ದಾಖಲಿಸಿ ಅಮಾನತ್ತು ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸಿದ ವಿದ್ಯಾರ್ಥಿನಿಯ ಸಹೋದರನ ಮೇಲೂ ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.