ಶಿವಮೊಗ್ಗ: ಭದ್ರಾವತಿಯ ಪೇಪರ್ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮೂಲದ ಮಹಿಳೆ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಕೆಂಗೇರಿ ನಿವಾಸಿ ಮಂಜುಳಾ.ಆರ್(21) ಮತ್ತು ಸುಜೈನ್ ಖಾನ್ (24) ಬಂಧಿತ ಆರೋಪಿ.
ಆ.18 ರಂದು ಪೇಪರ್ ಟೌನ್ 5ನೇ ವಾರ್ಡ್‌ನಲ್ಲಿನ ನಿವಾಸಿ ಚಂದ್ರಮ್ಮ ಎಂಬವರ ಮನೆಯಲ್ಲಿ ಕಳ್ಳತನ ನಡೆದಿತ್ತು. ಮನೆಯ ಬೀರುವಿನಲ್ಲಿದ್ದ ಚಿನ್ನಾಭರಣಗಳನ್ನು ಕಳವು ಮಾಡಲಾಗಿತ್ತು. ಪ್ರಕರಣದ ಸಂಬಂಧ ಭದ್ರಾವತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಮಂಗಳೂರು: ಮುಸ್ಲಿಂ ಕುಟುಂಬವೊಂದಕ್ಕೆ ಮನೆಯಲ್ಲಿ ಅಡುಗೆ ಮಾಡಿಕೊಡಲು ಮುಸ್ಲಿಂ ಮಹಿಳೆ ಬೇಕಾಗಿದ್ದಾರೆ. Salary 25000/- ಸಂಪರ್ಕ ಸಂಖ್ಯೆ: 8660040298
ಪೊಲೀಸರು ಆ.30ರಂದು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 7.82 ಲಕ್ಷ ರೂ. ಮೌಲ್ಯದ 83 ಗ್ರಾಂ ತೂಕದ ಮಾಂಗಲ್ಯ ಸರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.