ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲ್ಲೂಕಿನ ಕುಂಜಾಲು ಸಮೀಪದ ಹೇರಂಜೆ ಕ್ರಾಸ್‌ನಲ್ಲಿ ಸೋಮವಾರ ಮಧ್ಯಾಹ್ನ ನಡೆದ ದಾರುಣ ಘಟನೆ ಸ್ಥಳೀಯರನ್ನು ಬೆಚ್ಚಿಬೀಳುವಂತೆ ಮಾಡಿದೆ. ತಾಯಿ ತನ್ನ ಪುಟಾಣಿ ಮಗುವಿನೊಂದಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೃತರನ್ನು ಸ್ಥಳೀಯ ನಿವಾಸಿ ಸುಶ್ಮಿತಾ (23) ಮತ್ತು ಅವರ ಮಗ ಶ್ರೇಷ್ಠ (1.6 ವರ್ಷ) ಎಂದು ಗುರುತಿಸಲಾಗಿದೆ. ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರೂ ಪತ್ತೆಯಾಗಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಸುಶ್ಮಿತಾ ಅವರು ಆತ್ಮಹತ್ಯೆಗೆ ಮುನ್ನ “ನನ್ನ ಸಾವಿಗೆ ನಾನೇ ಕಾರಣ” ಎಂದು ಬರೆದುಕೊಂಡಿರುವ ಡೆತ್ ನೋಟ್ ಸಿಕ್ಕಿದೆ. ಆದರೂ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.
ಸುದ್ದಿ ತಿಳಿದು ಗ್ರಾಮಸ್ಥರು ದೊಡ್ಡ ಸಂಖ್ಯೆಯಲ್ಲಿ ಸ್ಥಳಕ್ಕೆ ಸೇರಿಕೊಂಡು ದುಃಖ ವ್ಯಕ್ತಪಡಿಸಿದರು. ಚಿಕ್ಕ ಮಗು ಸಹ ತಾಯಿಯೊಂದಿಗೆ ಜೀವ ಕಳೆದುಕೊಂಡಿರುವುದು ಸಕಂಡು ಸೇರಿದವರು ಕಣ್ಣೀರು ಸುರಿಸಿದರು.
ಘಟನಾ ಸ್ಥಳಕ್ಕೆ ಬ್ರಹ್ಮಾವರ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಹೆಚ್ಚಿನ ತನಿಖೆ ನಡೆಯುತ್ತಿದೆ.