ಮಳೆಗೆ ನಲುಗಿದ ಹಿಮಾಚಲ, ಮತ್ತೆ ಭೂಕುಸಿತ ಪ್ರವಾಹದ ಭೀತಿ!

ಶಿಮ್ಲಾ: ಹಿಮಾಚಲ ಪ್ರದೇಶದ ಆರು ಜಿಲ್ಲೆಗಳಾದ ಉನಾ, ಹಮೀರ್‌ಪುರ, ಬಿಲಾಸ್‌ಪುರ, ಕಾಂಗ್ರಾ, ಮಂಡಿ ಮತ್ತು ಸಿರ್ಮೌರ್‌ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರಾಜ್ಯದ ಹಲವಾರು ಭಾಗಗಳಲ್ಲಿ ಭೂಕುಸಿತ ಸಂಭವಿಸಿದ್ದು ಹಲವಾರು ಮನೆಗಳಿಗೂ ಹಾನಿಯಾಗಿದೆ. 5 ರಾಷ್ಟ್ರೀಯ ಹೆದ್ದಾರಿಗಳು ಮತ್ತು ಇತರ 788 ರಸ್ತೆಗಳು ಸಂಪರ್ಕ ಕಡಿತಗೊಂಡಿವೆ. 2100ಕ್ಕೂ ಹೆಚ್ಚು ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗಳು ಹಾನಿಗೊಳಗಾಗಿವೆ. 365 ಕುಡಿಯುವ ನೀರಿನ ಟ್ಯಾಂಕ್‌ ಹಾಗೂ ಇನ್ನಿತರ ಮೂಲಗಳಿಗೆ ಸಮಸ್ಯೆಯಾಗಿದೆ.

ಶಿಮ್ಲಾದಲ್ಲಿ ಕಳೆದ 24 ಗಂಟೆಯಲ್ಲಿ 4 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇನ್ನು ಉತ್ತರಾಖಂಡದಲ್ಲಿ ಕಳೆದ 48 ಗಂಟೆಗಳಿಂದ ಭಾರೀ ಮಳೆಯಾಗುತ್ತಿದೆ. ನಿರಂತರ ಮಳೆಯಿಂದಾಗಿ, ನದಿಗಳು ಮತ್ತು ಹೊಳೆಗಳ ನೀರಿನ ಮಟ್ಟ ಹೆಚ್ಚಾಗಿದೆ. ರಾಜ್ಯದ 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಮತ್ತು ಉಳಿದ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಮುಂದಿನ 5 ದಿನಗಳವರೆಗೆ ರಾಜ್ಯಾದ್ಯಂತ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

error: Content is protected !!