ಮಾದಕ ವಸ್ತು ಸಾಗಾಟ, ಮಾರಾಟ: ಇಬ್ಬರು ಪೊಲೀಸರ ವಶ !

ಮಂಗಳೂರು: ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತುವನ್ನು ಮಾರಾಟ ಮತ್ತು ಸಾಗಾಟ ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ದಸ್ತಗಿರಿ ಮಾಡಿ ಮಾದಕ ವಸ್ತುಗಳನ್ನು ಮತ್ತು ಮೊಬೈಲ್ ಫೋನ್ ಗಳನ್ನು ಸ್ವಾಧೀನಪಡಸಿಕೊಂಡಿದ್ದಾರೆ.

ಬಿಹಾರ ರಾಜ್ಯದ ನಳಂದ ಅರ್ನೌಟ್ ಗ್ರಾಮದ ಹರ್ಷ ಕುಮಾರ್(22) ಮತ್ತು ವೈಶಾಲಿ ಜಿಲ್ಲೆಯ ಮನ್ಸೂರ್ಪುರ್ ಹಲಯ್ಯ, ಶಾಪುರ್ ಗ್ರಾಮದ ಅಮರ್ ಕುಮಾರ (28) ಬಂಧಿತ ಆರೋಪಿಗಳು.

ಖಚಿತ ಮಾಹಿತಿ ಮೇರೆಗೆ ಮಂಗಳೂರು ನಗರ ಉತ್ತರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಶ್ರೀಕಾಂತ್ ಕೆ ಅವರ ನಿರ್ದೆಶನದಂತೆ ಪಣಂಬೂರು ಠಾಣಾ ಪೊಲೀಸ್ ನಿರೀಕ್ಷಕರಾದ ಮೊಹಮ್ಮದ್ ಸಲೀಂ ಅಬ್ಬಾಸ್ ರವರ ನೇತೃತ್ವದಲ್ಲಿ ಪಣಂಬೂರು ಠಾಣಾ ಪಿಎಸ್‌ಐ ಜ್ಞಾನಶೇಖರ ಅವರು ತಮ್ಮ ಸಿಬ್ಬಂದಿಗಳೊಂದಿಗೆ ಸೋಮವಾರ(ಸೆ. 1)ದಂದು ಸಂಜೆ 4.40ರ ಸುಮಾರಿಗೆ ತೋಕೂರು ರೈಲ್ವೇ ನಿಲ್ದಾಣ ರಸ್ತೆಯ ಬಳಿ ದಾಳಿ ನಡೆಸಿತು. ಈ ವೇಳೆ ಆರೋಪಿಗಳು ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿರುವುದು ಬೆಳಕಿಗೆ ಬಂದಿದೆ.

(ಜಾಹೀರಾತು)ಮಂಗಳೂರು: ADVOCATE ಕಚೇರಿಗೆ ಪದವಿ ಪಡೆದಿರುವ ಯುವತಿ ಬೇಕಾಗಿದ್ದಾರೆ. ಸಂಪರ್ಕ ಸಂಖ್ಯೆ: 8660040298

ಆರೋಪಿ ಹರ್ಷ ಕುಮಾರ್ ಎಂಬಾತನಿಂದ 1.230 ಕೆ.ಜಿ ಮತ್ತು ಆರೋಪಿ ಅಮರ್ ಕುಮಾರ್ ಎಂಬಾತನಿಂದ 80 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ಇದರ ಒಟ್ಟು ಮೌಲ್ಯ ಸುಮಾರು 75,000 ರೂ. ಆಗಿದ್ದು, ಗಾಂಜಾ ಮಾರಾಟ ಮಾಡಲು ಉಪಯೋಗಿಸುತ್ತಿದ್ದ 2 ಮೊಬೈಲ್ ಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.

ಆರೋಪಿಗಳ ಪೈಕಿ ಒಬ್ಬ ಬಿಹಾರದ ಪಟ್ನಾದಲ್ಲಿ ಮೀಶೋ ಮತ್ತು ಫ್ಲಿಫ್ ಕಾರ್ಟ್ ಹಬ್ ನಲ್ಲಿ ಮತ್ತು ಇನ್ನೊಬ್ಬ ದೆಹಲಿಯಲ್ಲಿ ತರಕಾರಿ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಆರೋಪಿಗಳ ವಿರುದ್ಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆ ಸೆಕ್ಷನ್ 8(c), 20(b)(ii)(B)(ಅಪರಾಧ ಸಂಖ್ಯೆ 75/2025) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.

error: Content is protected !!