ಕ್ಯಾನ್‌ಬೆರಾ: ಟಿ20 ಅಂತಾರಾಷ್ಟ್ರೀಯ ಪಂದ್ಯಕ್ಕೆ ಆಸ್ಟ್ರೇಲಿಯಾದ ವೇಗಿ ಮಿಚೆಲ್ ಸ್ಟಾರ್ಕ್ ನಿವೃತ್ತಿ ಘೋಷಿಸಿದ್ದಾರೆ. ಏಕದಿನ ವಿಶ್ವಕಪ್ ಮೇಲೆ ಗಮನ ಹರಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ.
2027 ರ ಪುರುಷರ ಏಕದಿನ ವಿಶ್ವಕಪ್‌ಗಾಗಿ ಎದುರು ನೋಡುತ್ತಿರುವ ನಾನು, ಆಟದಲ್ಲಿ ತಾಜಾತನ ಮತ್ತು ಫಿಟ್ ನೆಸ್ ಕಾಯ್ದುಕೊಳ್ಳಲು ಇದು ನನ್ನ ಉತ್ತಮ ಮಾರ್ಗ ಎಂದು ಭಾವಿಸುತ್ತೇನೆ ಎಂದು ಮಿಚೆಲ್ ಸ್ಟಾರ್ಕ್ ತಿಳಿಸಿದ್ದಾರೆ.
ಸ್ಟಾರ್ಕ್ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 79 ವಿಕೆಟ್‌ಗಳನ್ನು ಗಳಿಸುವ ಮೂಲಕ ಆಡಮ್ ಜಂಪಾ ನಂತರ ಆಸ್ಟ್ರೇಲಿಯಾ ಪರ ಎರಡನೇ ಅತ್ಯಧಿಕ ವಿಕೆಟ್‌ಗಳನ್ನು ಗಳಿಸಿದ್ದಾರೆ.
(ಜಾಹೀರಾತು)ಮಂಗಳೂರು: ADVOCATE ಕಚೇರಿಗೆ ಪದವಿ ಪಡೆದಿರುವ ಯುವತಿ ಬೇಕಾಗಿದ್ದಾರೆ. ಸಂಪರ್ಕ ಸಂಖ್ಯೆ: 8660040298
ಆಸ್ಟ್ರೇಲಿಯಾದ ಪರ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಎರಡನೇ ಬೌಲರ್ ಆಗಿದ್ದಾರೆ. ಆಡಮ್ ಜಂಪಾ ಮೊದಲ ಸ್ಥಾನದಲ್ಲಿದ್ದಾರೆ. 2012 ರಲ್ಲಿ ಪಾಕಿಸ್ತಾನ ವಿರುದ್ಧ ತಮ್ಮ ಮೊದಲ ಪಂದ್ಯ ಆಡಿದರು. 65 ಪಂದ್ಯಗಳ ವೃತ್ತಿಜೀವನದಲ್ಲಿ ಅವರು 7.74 ರ ಎಕಾನಮಿ ದರದಲ್ಲಿ 79 ವಿಕೆಟ್‌ಗಳನ್ನು ಕಿತ್ತಿದ್ದಾರೆ. ಆರು ಟಿ20 ವಿಶ್ವಕಪ್‌ಗಳ ಪೈಕಿ ಐದರಲ್ಲಿ ಆಡಿದ್ದಾರೆ. ಗಾಯದಿಂದಾಗಿ 2016 ರ ಆವೃತ್ತಿಯನ್ನು ಮಾತ್ರ ಕಳೆದುಕೊಂಡಿದ್ದರು. 2021 ರಲ್ಲಿ ದುಬೈನಲ್ಲಿ ಆಸ್ಟ್ರೇಲಿಯಾ ಪ್ರಶಸ್ತಿ ಗೆಲ್ಲುವಲ್ಲಿ ಸ್ಟಾರ್ಕ್ ಪ್ರಮುಖ ಪಾತ್ರ ವಹಿಸಿದ್ದರು.