ಉಳ್ಳಾಲ: ನಿಷೇಧಿತ ಎಂಡಿಎಂಎ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಇಬ್ಬರು ಆರೋಪಿಗಳನ್ನು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಗ್ರಾಮದ ತಚ್ಛಣಿ ಗ್ರೌಂಡ್ ನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಫಝಲ್ ಹುಸೇನ್(33) ಮತ್ತು ನೌಶಾದ್(32) ಬಂಧಿತ ಆರೋಪಿಗಳು.
(ಜಾಹೀರಾತು)ಮಂಗಳೂರು: ADVOCATE ಕಚೇರಿಗೆ ಪದವಿ ಪಡೆದಿರುವ ಯುವತಿ ಬೇಕಾಗಿದ್ದಾರೆ. ಸಂಪರ್ಕ ಸಂಖ್ಯೆ: 8660040298
ಬಂಧಿತರು ತಚ್ಛಣಿ ಗ್ರೌಂಡ್ ನಲ್ಲಿ ಮಾದಕವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ, ಆರೋಪಿಗಳಿಂದ 15 ಗ್ರಾಂ ಎಂಡಿಎಂಎ, ಎರಡು ಮೊಬೈಲ್ ಫೋನ್, ಪೋರ್ಟಬಲ್ ಡಿಜಿಟಲ್ ತೂಕದ ಯಂತ್ರ ಸಹಿತ 95,500 ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಠಾಣೆಯಲ್ಲಿ ದೂರು ದಾಖಲಾಗಿದೆ.