ಮಾಸ್ಕ್‌ ಮ್ಯಾನ್ ಚಿನ್ನಯ್ಯ‌ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದ ಸಾಕ್ಷಿ-ದೂರುದಾರನಾಗಿ ಬಂದು ಬಳಿಕ ಆರೋಪಿ ಪಟ್ಟಿಗೆ ಸೇರ್ಪಡೆಯಾದ ಮಾಸ್ಕ್‌ ಮ್ಯಾನ್‌ ಚಿನ್ನಯ್ಯನನ್ನು ಬುಧವಾರ ಮಧ್ಯಾಹ್ನ ಎಸ್‌ಐಟಿ ತಂಡ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿತು.

ಆಗಸ್ಟ್‌ 23ರಂದು ಚಿನ್ನಯ್ಯನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ, ತನಿಖೆಗಾಗಿ ವಶಕ್ಕೆ ಪಡೆದಿದ್ದ ಎಸ್‌ಐಟಿ ತಂಡವು, ಆತನ ಮಾಹಿತಿಯ ಆಧಾರದ ಮೇಲೆ ಮಹೇಶ್ ಶೆಟ್ಟಿ ತಿಮರೋಡಿ ಮನೆ, ಜಯಂತ್ ಟಿ. ಮನೆ ಸೇರಿ ಹಲವು ಸ್ಥಳಗಳಲ್ಲಿ ಮಹಜರು ನಡೆಸಿತ್ತು.

ಆರೋಪಿಯನ್ನು ಮತ್ತೆ ವಶಕ್ಕೆ ಪಡೆಯಲು ಎಸ್‌ಐಟಿ ಸಜ್ಜಾಗಿದ್ದು, ನ್ಯಾಯಾಲಯವು ಎಷ್ಟು ದಿನಗಳ ತನಿಖಾ ವಶ ನೀಡಲಿದೆ ಎಂಬುದು ಕಾದು ನೋಡಬೇಕಾಗಿದೆ.

ನ್ಯಾಯಾಲಯದಲ್ಲಿ ಚಿನ್ನಯ್ಯನು ತಾನಿಗೆ ವಕೀಲರ ನೆರವು ಬೇಕೆಂದು ಮನವಿ ಮಾಡಿದ್ದು, ಅದರಂತೆ ಮಂಗಳೂರು ಕಾನೂನು ಸೇವೆಗಳ ಪ್ರಾಧಿಕಾರದ ವಕೀಲರು ಆತನ ಪರವಾಗಿ ಹಾಜರಾಗಿದ್ದಾರೆ.

error: Content is protected !!