ಧಾರವಾಡ: ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣದ ಆರೋಪಿ ಫಯಾಜ್‌ನ ಜಾಮೀನು ಅರ್ಜಿಯನ್ನು ಧಾರವಾಡ ಹೈಕೋರ್ಟ್ ಪೀಠವು ವಜಾಗೊಳಿಸಿದೆ.
2024ರ ಏಪ್ರಿಲ್ 18ರಂದು ನಡೆದಿದ್ದ ಕ್ರೂರ ಹತ್ಯೆ ಪ್ರಕರಣದ ನಂತರ ಬಂಧಿತನಾಗಿದ್ದ ಫಯಾಜ್, ಜಾಮೀನು ಕೋರಿ ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವನ್ನು ಮೊರೆ ಹೋಗಿದ್ದ. ಆದರೆ ನ್ಯಾಯಾಲಯವು ಅರ್ಜಿಯನ್ನು ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದ ಆರೋಪಿ, ಅಲ್ಲಿ ಸಹ ನಿರಾಸೆಯಾದರು. ಹೀಗಾಗಿ ಹಂತಕ ಫಯಾಜ್‌ಗೆ ಜೈಲೇ ಗತಿ ಅನಿವಾರ್ಯವಾಗಿದೆ.
ಪ್ರಕರಣದ ಹಿನ್ನೆಲೆ
ಏಪ್ರಿಲ್ 18, 2024ರಂದು ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ 24 ವರ್ಷದ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠನನ್ನು, ಆರೋಪಿ ಫಯಾಜ್ 10ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದ. ಘಟನೆಯ ಬಳಿಕ ಪರಾರಿಯಾದ ಫಯಾಜ್, ಬಳಿಕ ಬೆಳಗಾವಿ ಜಿಲ್ಲೆಯಲ್ಲಿ ಪೊಲೀಸರ ಬಲೆಗೆ ಸಿಕ್ಕಿಬಿದ್ದ.
ರಾಜ್ಯಾದ್ಯಂತ ವಿದ್ಯಾರ್ಥಿಗಳು ಹಾಗೂ ನಾಗರಿಕರು ಆಕ್ರೋಶ ವ್ಯಕ್ತಪಡಿಸಿ ಭಾರಿ ಮಟ್ಟದ ಪ್ರತಿಭಟನೆ ನಡೆಸಿದ್ದರು.