ಕಾರು-ಟ್ಯಾಂಕರ್ ಭೀಕರ ಅಪಘಾತ: ಮಹಿಳೆ ಸಾ*ವು !

ಅರಂತೋಡು: ಕಾರು ಮತ್ತು ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭವಿಸಿ ಮಹಿಳೆಯೋರ್ವರು ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಮಾಣಿ -ಮೈಸೂರು ರಾ.ಹೆ. ಕಲ್ಲುಗುಂಡಿ ಸಮೀಪ ಕಡೆಪಾಲ ಎಂಬಲ್ಲಿ ಇಂದು(ಸೆ.3) ನಡೆದಿದೆ.

ಕೊಡಗಿನ‌ ಸಿದ್ದಾಪುರದ ನೆಲ್ಲಿಹುದುಕೇರಿ ನಿವಾಸಿ ಶೋಭಾ ಮೃತಪಟ್ಟ ಮಹಿಳೆ.

ಮಡಿಕೇರಿ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಟ್ಯಾಂಕರ್ ಹಾಗೂ ಸುಳ್ಯದಿಂದ ಮಡಿಕೇರಿಗೆ ತೆರಳುತ್ತಿದ್ದ ಕಾರು ಮಧ್ಯೆ ಭೀಕರ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಮಹಿಳೆ ಮೃತಪಟ್ಟಿದ್ದಾರೆ ಹಾಗೂ ಮತ್ತಿಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಅಪಘಾತಕ್ಕೆ ತುತ್ತಾದ ಕಾರು ಕೊಡಗಿನ ಸಿದ್ಧಾಪುರದ ನೆಲ್ಲಿಹುದಿಕೇರಿಯದ್ದು ಎಂದು ಹೇಳಲಾಗುತ್ತಿದೆ.

(ಜಾಹೀರಾತು)ಮಂಗಳೂರು: ADVOCATE ಕಚೇರಿಗೆ ಪದವಿ ಪಡೆದಿರುವ ಯುವತಿ ಬೇಕಾಗಿದ್ದಾರೆ. ಸಂಪರ್ಕ ಸಂಖ್ಯೆ: 8660040298

ಗಾಯಾಳುಗಳಿಗೆ ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

error: Content is protected !!