ಉಡುಪಿ: ಜಿಲ್ಲೆಯ ಅಲೆವೂರು ಕುಕ್ಕಿಕಟ್ಟೆ ಸಮೀಪ ಮುಸುಕುಧಾರಿ ಕಳ್ಳರ ತಂಡವೊಂದು ಮನೆಗಳಿಗೆ ನುಗ್ಗಿ ಕಳವಿಗೆ ಯತ್ನಿಸಿರುವ ಬಗ್ಗೆ ಮಂಗಳವಾರ(ಸೆ.3) ತಡರಾತ್ರಿ ನಡೆದಿದೆ.
ಕಳ್ಳರು ಕಳವಿಗೆ ಯತ್ನಿಸಿರುವ, ಓಡಾಟ ನಡೆಸಿರುವ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಮೂವರು ಮುಸುಕುಧಾರಿಗಳ ತಂಡವು ಕುಕ್ಕಿಕಟ್ಟೆ ಮುಚ್ಚಲಗೋಡು ಸಮೀಪದ ಸುಬ್ರಹ್ಮಣ್ಯ ನಗರದ ವಿಠ್ಠಲ ಪೂಜಾರಿ ಅವರ ಮನೆಗೆ ನುಗ್ಗಿ, ಅಲ್ಲಿಯ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿ ಬಹಳಷ್ಟು ಹುಡುಕಾಟ ನಡೆಸಿದೆ. ಆದರೆ ಯಾವುದೇ ಸೊತ್ತುಗಳ ಸಿಗದ ಹಿನ್ನೆಲೆಯಲ್ಲಿ ಕಳ್ಳರು ಅಲ್ಲಿಂದ ತೆರಳಿದ್ದಾರೆ. ಈ ವೇಳೆ ಮನೆಯಲ್ಲಿ ಯಾರೂ ಇರಲಿಲ್ಲ ಎನ್ನಲಾಗಿದೆ.
(ಜಾಹೀರಾತು)ಮಂಗಳೂರು: ADVOCATE ಕಚೇರಿಗೆ ಪದವಿ ಪಡೆದಿರುವ ಯುವತಿ ಬೇಕಾಗಿದ್ದಾರೆ. ಸಂಪರ್ಕ ಸಂಖ್ಯೆ: 8660040298
ಇನ್ನೊಂದು ಮನೆಗೆ ನುಗ್ಗಲು ಯತ್ನಸಿದ್ದು, ಅದೇ ಸಮಯಕ್ಕೆ ಮನೆಯವರು ಎಚ್ಚರಗೊಂಡು ದೀಪ ಹಾಕಿದ್ದಾರೆ. ಈ ವೇಳೆ ಕಳ್ಳರ ತಂಡ ಅಲ್ಲಿಂದ ಪರಾರಿಯಾಗಿದ್ದಾರೆ. ಪರಿಸರದ ಸಿಸಿಟಿವಿಯೊಂದರಲ್ಲಿ ಕಳ್ಳರು ರಸ್ತೆಯಲ್ಲಿ ಮನೆಗಳನ್ನು ಗುರುತಿಸಿಕೊಂಡು ಹೋಗುತ್ತಿರುವ ದೃಶ್ಯಗಳು ಸೆರೆಯಾಗಿವೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಪೊಲೀಸರು ದೃಶ್ಯಾವಳಿ ಕಲೆ ಹಾಕಿದ್ದು, ಆರೋಪಿಗಳ ಪತ್ತೆಗಾಗಿ ಬಲೆಬೀಸಿದ್ದಾರೆ. ಕಳ್ಳರು ಮುಸುಕು ಧರಿಸಿದ್ದು, ಮುಖಚಹರೆ ಅಸ್ಪಷ್ಟವಾಗಿದೆ. ಆದರೆ ಕಳ್ಳರ ಚಲನವಲನದ ಬಗ್ಗೆ ನಿಗಾ ಇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.