ಬೆಂಗಳೂರು: ಮಹಿಳೆ ಮೇಲೆ ಅತ್ಯಾಚಾರ, ಜಾತಿನಿಂದನೆ ಸೇರಿದಂತೆ ಒಟ್ಟು ಆರು ಕೃತ್ಯಗಳನ್ನು ಎಸಗಿದ ಆರೋಪ ಎದುರಿಸುತ್ತಿರುವ ಶಾಸಕ ಮುನಿರತ್ನಗೆ ಇದೀಗ ಬಿಗ್ ರಿಲೀಫ್ ಸಿಕ್ಕಿದೆ.
2025 ಮೇ 20 ರಂದು ಸುಮಾರು 40 ವರ್ಷ ವಯಸ್ಸಿನ ಮಹಿಳೆ ನಗರದ ಆರ್‌ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಶಾಸಕ ಮುನಿರತ್ನ ಸೇರಿದಂತೆ ಅವರ ಬೆಂಬಲಿಗರು ಗ್ಯಾಂಗ್ ರೇಪ್ ಮಾಡಿದ್ದಾರೆ ಎಂದು ಮಹಿಳೆ ದೂರು ನೀಡಿದ್ದರು. ಈ ಬಗ್ಗೆ ಆರ್‌ಎಂಸಿ ಯಾರ್ಡ್ ಪೊಲೀಸರು ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಿದ್ದರು. ನಂತರ ಸರ್ಕಾರ ಪ್ರಕರಣವನ್ನು ಸಿಐಡಿ ಎಸ್‌ಐಟಿ ತನಿಖೆಗೆ ವಹಿಸಿತ್ತು. ಪ್ರಕರಣದ ತನಿಖೆ ನಡೆಸಿದ ಸಿಐಡಿ ಎಸ್‌ಐಟಿ ಅಧಿಕಾರಿಗಳು ಮೂರು ಪ್ರಕರಣಗಳಲ್ಲಿ ಸೂಕ್ತ ಸಾಕ್ಷ್ಯಧಾರಗಳ ಕೊರತೆ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಆ ಮೂಲಕ ಅತ್ಯಾಚಾರ ಮಾಡಿಸಿದ್ದರು ಎನ್ನಲಾಗಿದ್ದ ಆರೋಪದಡಿ ತನಿಖೆ ಎದುರಿಸಿದ್ದ ಮುನಿರತ್ನಗೆ ಕ್ಲೀನ್ ಚಿಟ್ ಸಿಕ್ಕಿದೆ.
(ಜಾಹೀರಾತು)ಮಂಗಳೂರು: ADVOCATE ಕಚೇರಿಗೆ ಪದವಿ ಪಡೆದಿರುವ ಯುವತಿ ಬೇಕಾಗಿದ್ದಾರೆ. ಸಂಪರ್ಕ ಸಂಖ್ಯೆ: 8660040298
ಸಿಐಡಿ ಎಸ್‌ಐಟಿ ಬಿ ರಿಪೋರ್ಟ್ ಸಲ್ಲಿಸಿದ ಬಗ್ಗೆ ಪ್ರತಿಕ್ರಿಯೆ ನೀಡಿದ ಶಾಸಕ ಮುನಿರತ್ನ, “ಇದು ಸತ್ಯಕ್ಕೆ ಸಂದ ಜಯವಾಗಿದೆ. ಕಂಡವರ ಹೆಣ್ಣು ಮಕ್ಕಳಿಂದ ದೂರು ಕೊಡಿಸುವುದನ್ನು ಬಿಡಬೇಕು. ಡಿಕೆ ಸುರೇಶ್ ಸೋತ ನಂತರ, ಕುಸುಮಾ ಸೋತ ನಂತರ ನನ್ನ ವಿರುದ್ಧ ಅತ್ಯಾಚಾರ ಪ್ರಕರಣಗಳು ಜಾಸ್ತಿಯಾಗಿವೆ. ಯಾರಿಗೆ ಯಾವುದೂ ಶಾಶ್ವತವಲ್ಲ, ನಾನು ಎಲ್ಲವನ್ನು ದೇವರಿಗೆ ಬಿಟ್ಟಿದ್ದೇನೆ. ಸುದ್ದಿಗೋಷ್ಠಿ ನಡೆಸಿ, ಎಲ್ಲ ಮಾಹಿತಿಗಳನ್ನು ಹಂಚಿಕೊಳ್ಳುತ್ತೇನೆ” ಎಂದು ತಿಳಿಸಿದರು.