ಪುತ್ತೂರು : ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ಆಕೆ ಗರ್ಭವತಿಯಾದ ಬಳಿಕ ವಿವಾಹವಾಗಲು ನಿರಾಕರಿಸಿದ ಪ್ರಕರಣದಲ್ಲಿ ಬಂಧಿತನಾಗಿದ್ದ ನಿವಾಸಿ ಕೃಷ್ಣ ಜೆ. ರಾವ್ (21) ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ವಿದ್ಯಾರ್ಥಿನಿ ಗರ್ಭಿಣಿ ಪ್ರಕರಣಕ್ಕೆ ಸಂಬಂಧಿಸಿ ಬಪ್ಪಳಿಗೆ ನಿವಾಸಿ ಕೃಷ್ಣ ಜೆ. ರಾವ್ (21) ವಿರುದ್ಧ ಮಹಿಳಾ ಠಾಣೆಯಲ್ಲಿ ಅತ್ಯಾಚಾರ ಮತ್ತು ನಂಬಿಕೆ ದ್ರೋಹದ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಕೃಷ್ಣ ಜೆ. ರಾವ್ ತಲೆ ಮರೆಸಿಕೊಂಡಿದ್ದ. ಜು.5 ರಂದು ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದರು.
(ಜಾಹೀರಾತು)ಮಂಗಳೂರು: ADVOCATE ಕಚೇರಿಗೆ ಪದವಿ ಪಡೆದಿರುವ ಯುವತಿ ಬೇಕಾಗಿದ್ದಾರೆ. ಸಂಪರ್ಕ ಸಂಖ್ಯೆ: 8660040298
ಆರೋಪಿ ಪರ ಖ್ಯಾತ ನ್ಯಾಯವಾದಿ ಪಿ.ಪಿ. ಹೆಗ್ಡೆ ವಾದಿಸಿದ್ದಾರೆ.