ಅಪ್ಪನಿಗೆ ಹನಿಟ್ರ್ಯಾಪ್‌ ಬಲೆ ಬೀಸಿದ್ದ ಭೂಪ ಆರೆಸ್ಟ್ !

ಮಂಡ್ಯ:  ಹಣ ಆಸ್ತಿಗಾಗಿ ಮಗ ಪ್ರಣಾಮ್ ತಂದೆ ಸತೀಶ್‌ ಅವರನ್ನು ಬ್ಲ್ಯಾಕ್ ಮೇಲ್ ಮಾಡಿ ವಾಟ್ಸಾಪ್ ಗ್ರೂಪ್‌ಗೆ ತಂದೆಯ ಅಶ್ಲೀಲ ವಿಡಿಯೋ, ಅಡಿಯೋ ಕಳಿಸಿ, ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡಿರುವ ವಿಚಿತ್ರ ಪ್ರಕರಣವೊಂದು ಮಂಡ್ಯ ಜಿಲ್ಲೆಯ ಮದ್ದೂರುನಲ್ಲಿ ನಡೆದಿದೆ.

ಮಗನೇ ಮಾಡಿರುವ ಕಿತಾಪತಿ ಎಂದು ತಿಳಿದ ಬಳಿಕ ತಂದೆ ರೊಚ್ಚಿಗೆದ್ದು, ಮಗನ ವಿರುದ್ಧ ತಂದೆಯೇ ಪೊಲೀಸರಿಗೆ ದೂರು ನೀಡಿದ್ದಾರೆ. ತಂದೆಯ ದೂರಿನ ಆಧಾರದ ಮೇಲೆ ಮದ್ದೂರು ಪೊಲೀಸರು ಆರೋಪಿ ಮಗನ ವಿರುದ್ಧ ಕೇಸ್ ದಾಖಲಿಸಿ ಬಂಧಿಸಿ ಜೈಲಿಗೆ ಕಳಿಸಿದ್ದಾರೆ.

ಸತೀಶ್‌ ಮದ್ದೂರು ಟೌನ್‌ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದು, ಬಡವರಿಗೆ ಕಡಿಮೆ ರೇಟ್ ನಲ್ಲಿ ಸೈಟ್, ಮನೆ ಕೊಡುವ ಮೂಲಕ ತಮ್ಮದೇ ಆದ ರೀತಿಯಲ್ಲಿ ಹೆಸರು ಗಳಿಸಿದ್ದಾರೆ. ಮದ್ದೂರು, ಮಂಡ್ಯ, ಚಾಮರಾಜನಗರ ಸೇರಿದಂದೆ ವಿವಿಧೆಡೆ ಬರೀ 9 ಲಕ್ಷ ರೂಪಾಯಿಗೆ 1,200 ಚದರ ಅಡಿಯ ಅಳತೆಯ ನಿವೇಶನಗಳನ್ನು ಜನರಿಗೆ ಮಾರಾಟ ಮಾಡಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮದ ಮೂಲಕ ಸತೀಶ್ ಹಣ, ಹೆಸರು, ಖ್ಯಾತಿ ಎಲ್ಲವನ್ನೂ ಗಳಿಸಿದ್ದು, ರಾಣಿ ಐಶ್ಚರ್ಯ ಡೆವಲಪರ್ಸ್ ಹೆಸರಿನಲ್ಲಿ ರಿಯಲ್ ಎಸ್ಟೇಟ್ ಅನ್ನು ಸತೀಶ್ ನಡೆಸುತ್ತಿದ್ದಾರೆ.

ಅಪ್ಪನ ಆಸ್ತಿ, ಹೆಸರನ್ನ ಉನ್ನರಿಕರಿಸಬೇಕಿದ್ದ ಮಗ ದುಷ್ಟಟಗಳಿಗೆ ಬಲಿಯಾಗಿದ್ದ. ಕುಡಿತ, ಮೋಜು ಮಸ್ತಿ, ಜೊತೆಗೆ ಜೂಜು, ಶೇರ್​ ಮಾರ್ಕೆಟ್​ಗಳಲ್ಲಿ ಹಣ ವ್ಯಯಿಸಲು ಶುರುಮಾಡಿದ. ಹೀಗೆ 2 ಕೋಟಿ ರೂಪಾಯಿ ಆಸ್ತಿಯನ್ನ ದುಂದು ವೆಚ್ಚ ಮಾಡಿದ್ದಾನೆ. ತಾನು ಕಷ್ಟಪಟ್ಟು ದುಡಿದ ಹಣವನ್ನು ಮಗ ಈ ರೀತಿ ನೀರುಪಾಲು ಮಾಡುತ್ತಿರುವುದನ್ನು ಕಂಡು ಸತೀಶ್ ಮಗನ ಹೆಸರಿಗೆ ಮಾಡಿದ್ದ ಆಸ್ತಿಯನ್ನು ಆತ ಯಾರಿಗೂ ಮಾರದಂತೆ ಕೋರ್ಟ್​ನಿಂದ ತಡೆಯಾಜ್ಞೆ ತಂದಿದ್ದಾರೆ. ಈ ವಿಚಾರ ತಿಳಿದ ಪ್ರಣಮ್‌ ಕೋಪಗೊಂಡ ಅಪ್ಪನಿಗೇ 5 ಕೋಟಿ ರೂಪಾಯಿಗೆ ಡಿಮ್ಯಾಂಡ್​ ಮಾಡಿದ್ದ. ಹಣ ಕೊಡುವುದಿಲ್ಲ ಅಂತಾ ಹೇಳಿದ್ದಕ್ಕೆ ತಂದೆಯ ಅಶ್ಲೀಲ ಪೋಟೋ, ವಿಡಿಯೋಗಳನ್ನು ಹರಿಬಿಟ್ಟಿದ್ದಾನೆ.

ಅಪ್ಪನ ವಿರುದ್ಧವೇ ಹನಿಟ್ರ್ಯಾಪ್​ ವ್ಯೂಹ ರಚಿಸೋದಕ್ಕೆ ಒಂದು ಗ್ಯಾಂಗನ್ನೇ ಕಟ್ಟಿದ್ದನಂತೆ ಪ್ರಣಮ್. ಆ ಗ್ಯಾಂಗ್​ನಲ್ಲಿದ್ದವರೆಲ್ಲಾ ಸತೀಶ್ ಜೊತೆಗೇ ಕೆಲಸ ಮಾಡಿಕೊಂಡಿದ್ದವರೇ ಆಗಿದ್ದರು . ತಂದೆಯ ಅಶ್ಲೀಲ ಪೋಟೋ, ಕರೆಗಳು, ವಿಡಿಯೋಗಳನ್ನು ಮದ್ದೂರು ವಾಟ್ಸಾಪ್​ ಗ್ರೂಪ್​ಗಳಲ್ಲಿ ಹರಿಬಿಟ್ಟಿದ್ದಾನೆ. ಅವರು ಹರಿಬಿಟ್ಟಿರೋ ಆಡಿಯೋ, ವಿಡಿಯೋ ಎಲ್ಲವೂ ನಕಲಿ ಎಂದು ಸತೀಶ್‌ ಹೇಳಿದ್ದಾರೆ.

(ಜಾಹೀರಾತು)ಮಂಗಳೂರು: ADVOCATE ಕಚೇರಿಗೆ ಪದವಿ ಪಡೆದಿರುವ ಯುವತಿ ಬೇಕಾಗಿದ್ದಾರೆ. ಸಂಪರ್ಕ ಸಂಖ್ಯೆ: 8660040298

ಸತೀಶ್​ ಮಗ ಪ್ರಣಾಮ್​ಗೆ ಪ್ರಚೋದಿಸಿದವರು ಸೇರಿ ಎಲ್ಲರಿಗೂ ಈಗ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಪ್ರಣಮ್ ಜೊತೆ ಸಂಚಿನಲ್ಲಿ ಭಾಗಿಯಾಗಿದ್ದ ಆರೋಪಿಗಳಾದ ಮಹೇಶ್, ಪ್ರೀತಂ, ಈಶ್ವರ್ ಎಂಬವರನ್ನು ಮದ್ದೂರು ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಪ್ರಣಮ್ ಜೊತೆ ಈ ಮೂವರು ಕೂಡ ಈಗ ಜೈಲುಪಾಲಾಗಿದ್ದಾರೆ.

error: Content is protected !!