ಮಂಗಳೂರು: ಕರ್ನಾಟಕ ಸರಕಾರದ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನೀಡಲ್ಪಡುವ ರಾಜ್ಯ ಮಟ್ಟದ ಶಾಲೆಯ ಅಭಿವೃದ್ದಿ ಕೆಲಸಗಳಿಗೆ ನೀಡುವ ರಾಜ್ಯ ಮಟ್ಟದ ಅತ್ಯುತ್ತಮ ಶಾಲಾಭಿವೃದ್ದಿ ಸಮಿತಿ ಪುಷ್ಟಿ ಪುರಸ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಧ್ಯ ಶಾಲೆಯ ಶಾಲಾಭಿವೃದ್ದಿ ಸಮಿತಿ ಅಯ್ಕೆಯಾಗಿದೆ.
ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರೌಢಶಾಲೆ ಸಭಾಂಗಣದಲ್ಲಿ ನಡೆದ ಮಂಗಳೂರು ಉತ್ತರ ವಲಯದ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆಯ ಸಭಾ ಕಾರ್ಯಕ್ರಮದಲ್ಲಿ ಪ್ರಶಸ್ತಿ ಹಾಗೂ 1 ಲಕ್ಷ ರೂಪಾಯಿ ನಗದನ್ನು ವಿತರಿಸಿ ಸಮಿತಿಯನ್ನು ಪುರಸ್ಕರಿಸಲಾಯಿತು.
(ಜಾಹೀರಾತು)ಮಂಗಳೂರು: ADVOCATE ಕಚೇರಿಗೆ ಪದವಿ ಪಡೆದಿರುವ ಯುವತಿ ಬೇಕಾಗಿದ್ದಾರೆ. ಸಂಪರ್ಕ ಸಂಖ್ಯೆ: 8660040298
ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಭರತ್ ವೈ ಶೆಟ್ಟಿ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷೆ ಪ್ರಪುಲ್ಲ ಪಂಜ,ಶಾಲೆಯ ಮುಖ್ಯ ಶಿಕ್ಷಕಿ ಜೇನ್ ಡಿಸೋಜಾಗೆ ಪ್ರಶಸ್ತಿಯನ್ನು ಹಸ್ತಾಂತರಿಸಿದರು ಮಂಗಳೂರು ಉತ್ತರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಜೇಮ್ಸ್ ಕುಟಿನೋ ಉಪಸ್ಥಿತರಿದ್ದರು.