ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಿಜ್ಞಾಪನಾ ಪತ್ರ ಬಿಡುಗಡೆ

ತೋಕೂರು: ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವಳದ ಸಮಗ್ರ ಜೀರ್ಣೋದ್ಧಾರದ ಅಂಗವಾಗಿ ದೇವಳದ ಮೇಲ್ಛಾವಣಿಗೆ ತಗಡು ಚಪ್ಪರ ಅಳವಡಿಸುವ ಬಗ್ಗೆ ವಿಜ್ಞಾಪನ ಪತ್ರ ಬಿಡುಗಡೆಯು ಬ್ರಹ್ಮಶ್ರೀ ಶಿಬರೂರು ಗೋಪಾಲಕೃಷ್ಣ ತಂತ್ರಿಯವರ ನೇತೃತ್ವದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಮೂಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು, ದೇವಳದ ಪ್ರಧಾನ ಅರ್ಚಕರಾದ ಶ್ರೀ ಟಿ ಕೆ ಮಧುಸೂಧನ್ ಆಚಾರ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಗುರುರಾಜ್ ಎಸ್ ಪೂಜಾರಿ, , ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಪುರುಷೋತ್ತಮ ಸಿ ಕೋಟ್ಯಾನ್, ಸಂಪತ್ ಜೆ ಶೆಟ್ಟಿ ತೋಕೂರುಗುತ್ತು, ಅಶೋಕ್ ಕುಂದರ್, ಸವಿತಾ ಬೆಳ್ಳಾಯರು, ವಿಶ್ವನಾಥ್ ಮತ್ತು ಸ್ಥಳೀಯ ಸಂಘ ಸಂಸ್ಥೆಗಳ ಸದಸ್ಯರು ಹಾಗೂ ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

error: Content is protected !!