ಬಂಟ್ವಾಳ: ತುಂಬೆ ಗ್ರಾಮದಲ್ಲಿ ಆಗಸ್ಟ್ 14ರಂದು ನಡೆದ ಗೋ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಉಳ್ಳಾಲ ಚೆಂಬುಗುಡ್ಡೆಯ ಇರ್ಷಾದ್ (34), ಮಂಗಳೂರಿನ ಕುದ್ರೋಳಿಯ ಮೊಹಮ್ಮದ್ ಮನ್ಸೂರ್ (48) ಮತ್ತು ಮಂಗಳೂರಿನ ಕಣ್ಣೂರಿನ ಅಬ್ದುಲ್ ಅಝೀಮ್ (18) ಬಂಧಿತ ಆರೋಪಿಗಳು.
ಆರೋಪಿಗಳು ತುಂಬೆ ಬಳಿ ಜಾನುವಾರು ಕಳವು ಮಾಡಿದ್ದು, ಮರುದಿನ ಹತ್ಯೆಗೈದ ಜಾನುವಾರುಗಳ ಅವಶೇಷಗಳು ಪತ್ತೆಯಾಗಿವೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ಸಂಖ್ಯೆ 125/2025, ಸೆಕ್ಷನ್ 303(2), ಬಿಎನ್‌ಎಸ್, ಕರ್ನಾಟಕ ಗೋಹತ್ಯೆ ತಡೆ ಮತ್ತು ಸಂರಕ್ಷಣಾ ಕಾಯ್ದೆ-2020ರ ಸೆಕ್ಷನ್ 4 ಮತ್ತು 12 ಹಾಗೂ ಪ್ರಾಣಿ ಹಿಂಸೆ ತಡೆ ಕಾಯ್ದೆಯ ಸೆಕ್ಷನ್ 11(ಡಿ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
(ಜಾಹೀರಾತು)ಮಂಗಳೂರು: ADVOCATE ಕಚೇರಿಗೆ ಪದವಿ ಪಡೆದಿರುವ ಯುವತಿ ಬೇಕಾಗಿದ್ದಾರೆ. ಸಂಪರ್ಕ ಸಂಖ್ಯೆ: 8660040298
ವಿಚಾರಣೆ ವೇಳೆ ಇದೇ ಆರೋಪಿಗಳು ಸೆಪ್ಟೆಂಬರ್ 4ರಂದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಮತ್ತೊಂದು ಗೋಹತ್ಯೆ ಪ್ರಕರಣದಲ್ಲೂ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ.
ಆ ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.