ಕಾಸರಗೋಡು: ಗುಂಡು ಹಾರಿಸಿಕೊಂಡು ವೃದ್ಧರೋರ್ವರು ಆತ್ಮಹತ್ಯೆಗೆ ಶರಣಾದ ಘಟನೆ ಮಂಜೇಶ್ವರ ಠಾಣಾ ವ್ಯಾಪ್ತಿಯ ಮೀಯಪದವು ಮದಂಗಲ್ಲು ಎಂಬಲ್ಲಿ ನಡೆದಿದೆ.
ಮದಂಗಲ್ಲಿನ ಸುಬ್ರಾಯ ಭಟ್ (86) ಆತ್ಮಹತ್ಯೆಗೆ ಶರಣಾದ ವ್ಯಕ್ತಿ.
ಶುಕ್ರವಾರ(ಸೆ.6) ಮಧ್ಯಾಹ್ನ ಮನೆಯಲ್ಲಿ ಈ ಘಟನೆ ನಡೆದಿದ್ದು, ಮಾನಸಿಕ ಅಸ್ವಸ್ಥತೆಯಿಂದ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರ ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ.
(ಜಾಹೀರಾತು)ಮಂಗಳೂರು: ADVOCATE ಕಚೇರಿಗೆ ಪದವಿ ಪಡೆದಿರುವ ಯುವತಿ ಬೇಕಾಗಿದ್ದಾರೆ. ಸಂಪರ್ಕ ಸಂಖ್ಯೆ: 8660040298
ಸುಬ್ರಾಯ ಭಟ್ ಹಾಗೂ ಪತ್ನಿ ರಾಜಮ್ಮ ಮಾತ್ರ ಮನೆಯಲ್ಲಿ ವಾಸವಾಗಿದ್ದರು. ಮಂಜೇಶ್ವರ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಮಹಜರು ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಣ್ಣೂರು ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.