ಯುವಕನ‌ ಕೊಲೆ ಪ್ರಕರಣ: ಆರೋಪಿಯ ಪೊಲೀಸರ ವಶ !!!

ಸುರತ್ಕಲ್: ಮುಕ್ಕದಲ್ಲಿರುವ ರೋಹನ್ ಎಸ್ಟೇಟ್ ನಿಂದ ನಾಪತ್ತೆಯಾಗಿದ್ದ ಯುವಕನೋರ್ವನ ಮೃತದೇಹ ನೀರಿನ ಟ್ಯಾಂಕ್ ನಲ್ಲಿ ಪತ್ತೆಯಾಗಿರುವ ಪ್ರಕರಣ ಸಂಬಂಧ ಸುರತ್ಕಲ್ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಪಶ್ಚಿಮ ಬಂಗಾಳದ ಮಾಲ್ದಾ ಜಿಲ್ಲೆಯ ಪರಂಪು‌ರ್, ರತುವಾ ನಿವಾಸಿ ಮುಖೇಶ್ ಮಂಡಲ್ (27) ಮೃತಪಟ್ಟ ವ್ಯಕ್ತಿ. ಪಶ್ಚಿಮ ಬಂಗಾಲ ನಿವಾಸಿ ಲಕ್ಷ್ಮಣ್ ಮಂಡಲ್ ಯಾನೆ ಲಖನ್ ಬಂಧಿತ ಆರೋಪಿ.

ಮುಕ್ಕದಲ್ಲಿರುವ ರೋಹನ್ ಎಸ್ಟೇಟ್ ನಲ್ಲಿ ಕೂಲಿ ಕಾರ್ಮಿಕನಾಗಿ ದುಡಿಯುತ್ತಿದ್ದ ಮುಖೇಶ್ ಮಂಡಲ್ 2025ರ ಜೂನ್ 24ರಂದು ನಾಪತ್ತೆಯಾಗಿದ್ದು, ಈ ಕುರಿತು ಸುರತ್ಕಲ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

(ಜಾಹೀರಾತು)ಮಂಗಳೂರು: ADVOCATE ಕಚೇರಿಗೆ ಪದವಿ ಪಡೆದಿರುವ ಯುವತಿ ಬೇಕಾಗಿದ್ದಾರೆ. ಸಂಪರ್ಕ ಸಂಖ್ಯೆ: 8660040298

ನಾಪತ್ತೆಯಾಗಿದ್ದ ಮುಖೇಶ್ ಮಂಡಲ್ ನ ಮೃತದೇಹ 2025ರ ಆಗಸ್ಟ್ 21 ರಂದು ಎಸ್ಟೇಟ್ ನ ನೀರಿನ ಟ್ಯಾಂಕ್ ನಲ್ಲಿ ಪತ್ತೆಯಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭಿಸಿದ ಪೊಲೀಸರು ಪಶ್ಚಿಮ ಬಂಗಾಲ ನಿವಾಸಿ ಲಕ್ಷ್ಮಣ್ ಮಂಡಲ್ ಯಾನೆ ಲಖನ್ ಎಂಬಾತನನ್ನು ವಶಕ್ಕೆ ಪಡೆದು ಸುರತ್ಕಲ್ ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದರು ಎಂದು‌ ತಿಳಿದು ಬಂದಿದೆ. ಈ ಸಂದರ್ಭ ಆತ ಮುಖೇಶ್ ಮಂಡಲ್‌ ನನ್ನು ಕಬ್ಬಿಣದ ಸರಳಿನಿಂದ ತಲೆಗೆ ಹೊಡೆದು ಕೊಲೆ ಮಾಡಿ ನೀರಿನ ಟ್ಯಾಂಕ್ ಗೆ ಹಾಕಿ ಮರದ ಮುಚ್ಚಳ ಮುಚ್ಚಿರುವುದಾಗಿ ತಿಳಿಸಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

error: Content is protected !!