ಮಂಗಳೂರು: ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ಮಹಿಳಾ ಮೋರ್ಚಾ ವತಿಯಿಂದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಪ್ರಖ್ಯಾತ ಶಿಕ್ಷಕಿ ಶಾಂತಿ ಲೀನಾ ಪೈಸ್ ಅವರನ್ನು ಅಭಿನಂದಿಸಲಾಯಿತು.
ನಗರದ ಬಿಕರ್ನಕಟ್ಟೆಯ ನಾಲ್ಯಪದವು ಶಾಲೆಯಲ್ಲಿ ಅನೇಕ ವರ್ಷಗಳ ಕಾಲ ಮಕ್ಕಳಿಗೆ ಶಿಕ್ಷಣ ನೀಡಿದ ಪೈಸ್ ಅವರು ಪ್ರಸ್ತುತ ಬಂಟ್ವಾಳ ತಾಲೂಕಿನ ದೇವಸ್ಯ ಪಡೂರು ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರ ಸೇವೆಯನ್ನು ಪರಿಗಣಿಸಿ, 2025–26ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ʻಉತ್ತಮ ಶಿಕ್ಷಕಿʼ ಪ್ರಶಸ್ತಿ ಅವರಿಗೆ ಸಂದಿದೆ.
(ಜಾಹೀರಾತು)ಮಂಗಳೂರು: ADVOCATE ಕಚೇರಿಗೆ ಪದವಿ ಪಡೆದಿರುವ ಯುವತಿ ಬೇಕಾಗಿದ್ದಾರೆ. ಸಂಪರ್ಕ ಸಂಖ್ಯೆ: 8660040298
ಈ ಗೌರವ ಕಾರ್ಯಕ್ರಮದಲ್ಲಿ ಮಂಡಲ ಅಧ್ಯಕ್ಷ ರಮೇಶ್ ಕಂಡೆಟ್ಟು, ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ, ಜಿಲ್ಲಾ ಕಾರ್ಯದರ್ಶಿ ಪೂರ್ಣಿಮಾ, ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಪೂರ್ಣಿಮಾ ರಾವ್, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಹಾಗೂ ಪ್ರಭಾರಿ ಸಂಧ್ಯಾ ವೆಂಕಟೇಶ್, ಮಾಜಿ ಮನಪಾ ಸದಸ್ಯ ಕಿಶೋರ್ ಕೊಟ್ಟಾರಿ, ಪೂರ್ವ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರವಿಚಂದ್ರ, ಮಂಡಲ ಕಾರ್ಯದರ್ಶಿ ಮತ್ತು ಮಹಿಳಾ ಮೋರ್ಚಾ ಪ್ರಭಾರಿ ಮಂಗಳಾ ಆಚಾರ್, ಪ್ರಧಾನ ಕಾರ್ಯದರ್ಶಿ ಕಮಲಾಕ್ಷಿ ಗಂಗಾಧರ್ ಸೇರಿದಂತೆ ಮಹಿಳಾ ಮೋರ್ಚಾದ ಅನೇಕ ನಾಯಕಿಯರು ಹಾಗೂ ಕಾರ್ಯಕರ್ತೆಯರು ಉಪಸ್ಥಿತರಿದ್ದರು.