ಮಂಗಳೂರು: ಆಗಸ್ಟ್ 4, 2025ರಂದು ಪುತ್ತೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜರುಗಿದ ಮಂಗಳೂರು ವಿಶ್ವವಿದ್ಯಾನಿಲಯ ಅಂತರ ಕಾಲೇಜು ಮಟ್ಟದ ಈಜು ಸ್ಪರ್ಧೆಯಲ್ಲಿ, ವಿಶ್ವ ವಿದ್ಯಾನಿಲಯ ಕಾಲೇಜು ಮಂಗಳೂರು ಇಲ್ಲಿನ ವಿದ್ಯಾರ್ಥಿನಿ ವರ್ಷಾ ಪಿ. ಶ್ರೀಯನ್ ಒಟ್ಟು 8 ಚಿನ್ನದ ಪದಕ ಮತ್ತು 1 ಬೆಳ್ಳಿ ಪದಕಗಳನ್ನು ಗಳಿಸುವ ಮೂಲಕ ಅದ್ಭುತ ಸಾಧನೆಯನ್ನು ಮಾಡಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ಫ್ರೀ ಸ್ಟೈಲ್ ವಿಭಾಗದಲ್ಲಿ – 50 ಮೀ., 100 ಮೀ., 200 ಮೀ., 400 ಮೀ., ಹಾಗು ಬ್ರೆಸ್ಟ್ ಸ್ಟ್ರೋಕ್ನಲ್ಲಿ – 50 ಮೀ., 100 ಮೀ., 200 ಮೀ. ಹಾಗೂ ಇಂಡಿವಿಶುಯಲ್ ಮಿಡ್ಲೇ 200 ಮೀ. ನಲ್ಲಿ ಚಿನ್ನದ ಪದಕಗಳನ್ನು ಪಡೆದುಕೊಂಡಿದ್ದಾರೆ ಮತ್ತು ಫ್ರೀ ಸ್ಟೈಲ್ 800 ಮೀ. ನಲ್ಲಿ ಬೆಳ್ಳಿ ಪದಕ ಪಡೆದುಕೊಂಡಿದ್ದಾರೆ.
ಇವರ ಈ ಸಾಧನೆಗೆ ಕಾಲೇಜಿನ ಪ್ರಾಂಶುಪಾಲ ಗಣಪತಿ ಗೌಡ, ದೈಹಿಕ ಶಿಕ್ಷಣ ನಿದೇ೯ಶಕ ಡಾ. ಕೇಶವಮೂರ್ತಿ.ಟಿ ಹಾಗು ಸಿಬ್ಬಂದಿ ವರ್ಗ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.