ಜಿಲ್ಲಾ ಮಟ್ಟದ ದಸರಾ ಹ್ಯಾಂಡ್ ಬಾಲ್ ಕ್ರೀಡಾಕೂಟದಲ್ಲಿ ಅಸೋಶಿಯನ್ ನ ಪುರುಷ ಮತ್ತು ಮಹಿಳಾ ತಂಡಗಳಿಗೆ ಪ್ರಶಸ್ತಿ

ಮಂಗಳೂರು: ಮಂಗಳಾ ಕ್ರೀಡಾಂಗಣದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಹ್ಯಾಂಡ್ ಬಾಲ್ ಕ್ರೀಡಾ ಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಹ್ಯಾಂಡ್ ಬಾಲ್ ಅಸೋಶಿಯನ್ ನ ಪುರುಷ ಮತ್ತು ಮಹಿಳಾ ತಂಡಗಳು ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿ ಎರಡು ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ದಕ್ಷಿಣಕನ್ನಡ ಜಿಲ್ಲೆಯ ಹ್ಯಾಂಡ್ ಬಾಲ್ ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಹ್ಯಾಂಡ್ ಬಾಲ್ ಸಂಸ್ಥೆಯ ಅಧ್ಯಕ್ಷರು ಮತ್ತು ಕರ್ನಾಟಕ ಹ್ಯಾಂಡ್ ಬಾಲ್ ಸಂಸ್ಥೆಯ ಉಪಾಧ್ಯಕ್ಷರಾದ ಡಾ ಆರ್ ಧನರಾಜ್ ತಂಡಗಳೊಂದಿಗೆ ಪ್ರಶಸ್ತಿ ಪಡೆದುಕೊಂಡರು.

error: Content is protected !!