ಕಲಾ ನಿಧಿ ರಾಷ್ಟ್ರೀಯ ಪ್ರಶಸ್ತಿಗೆ ಡಾ. ಮಾಲತಿ ಶೆಟ್ಟಿ ಮಾಣೂರು ಆಯ್ಕೆ

ಮಂಗಳೂರು: ನಾಟ್ಯ ಮಯೂರಿ ಟ್ರಸ್ಟ್ ಆಶ್ರಯದಲ್ಲಿ ಬೆಂಗಳೂರಿನ ಕನ್ನಡ ಭವನದಲ್ಲಿ ಸೆಪ್ಟೆಂಬರ್ 27ರಂದು ನಡೆಯುವ ಕಾರ್ಯಕ್ರಮದಲ್ಲಿ ಮಂಗಳೂರಿನ ಅಮೃತ ಪ್ರಕಾಶ ಪತ್ರಿಕೆ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಅವರ ಸಾಹಿತ್ಯ ಹಾಗೂ ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ ಕಲಾ ನಿಧಿ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಕನ್ನಡ ಭವನದಲ್ಲಿ ನಡೆಯಲಿದ್ದು, ಟ್ರಸ್ಟಿನ ಸ್ಥಾಪಕರಾದ ಪ್ರೇಮಾಂಜಲಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಡಾ. ಮಾಲತಿ ಶೆಟ್ಟಿ ಮಾಣೂರುರವರು ಕಳೆದ 20 ವರುಷಗಳಿಂದ ಸಾಹಿತ್ಯ ಪತ್ರಿಕೋದ್ಯಮದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಕಳೆದ 12 ವರುಷಗಳಿಂದ ಸಾಹಿತ್ಯಪರ ಅಮೃತ ಪ್ರಕಾಶ ಪತ್ರಿಕೆಯನ್ನು ನಡೆಸುತ್ತಿದ್ದಾರೆ. ಈಗಾಗಲೇ 9 ಕೃತಿಗಳನ್ನು ಪ್ರಕಟಿಸಿದ್ದಾರೆ. ಇತರ ಹಿರಿಯ ಹಿರಿಯ ಲೇಖಕರ 45 ಕೃತಿಗಳನ್ನು ಸರಣಿ ಕೃತಿಯಲ್ಲಿ ಬಿಡುಗಡೆಗೊಳಿಸಿದ್ದಾರೆ.

ಸರಕಾರಿ ಹಾಗೂ ಖಾಸಗಿ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಸಾಹಿತ್ಯದ ಪ್ರೀತಿ ಮೂಡುವ ಸಲುವಾಗಿ ಉಚಿತವಾಗಿ ಯಶಸ್ವಿಯಾಗಿ 114 ಶಾಲಾ ಕಾಲೇಜುಗಳಲ್ಲಿ ಸಾಹಿತ್ಯ ಅಭಿರುಚಿ ಕಾರ್ಯಕ್ರಮವನ್ನು ಮಾಡಿದ್ದಾರೆ.

error: Content is protected !!