ಚಿಕ್ಕಬಳ್ಳಾಪುರ: ಪ್ರೇಯಸಿ ತನ್ನ ಫೋನ್ ನಂಬರ್ ಬ್ಲಾಕ್ ಮಾಡಿದ್ದಕ್ಕೆ ಮನನೊಂದ 26 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ಖಾಸಗಿ ಕಾಲೇಜು ಹಾಸ್ಟೆಲ್ನಲ್ಲಿ ನಡೆದಿದೆ.
ಕೇರಳದ ವಯನಾಡ್ ನಿವಾಸಿ ಮಹಮ್ಮದ್ ಷಬ್ಬೀರ್ (26) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಚಿಕ್ಕಬಳ್ಳಾಪುರದ ಖಾಸಗಿ ಕಾಲೇಜಿನ ಆಲೈಡ್ ಸೈನ್ಸ್ (ಆರ್ಸಿಟಿ) ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದ ಷಬ್ಬೀರ್, ಭಾನುವಾರ ಬೆಳಿಗ್ಗೆ ಹಾಸ್ಟೆಲ್ ಕೊಠಡಿಯಲ್ಲಿ ಕಿಟಕಿಯ ಗ್ರಿಲ್ಗೆ ಟವಲ್ ಕಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪೊಲೀಸರು ಕೊಠಡಿಯನ್ನು ಪರಿಶೀಲಿಸಿದಾಗ, ಸುಸೈಡ್ ನೋಟ್ ಪತ್ತೆಯಾಗಿದೆ. ಈ ನೋಟ್ನಲ್ಲಿ, ‘ನಾನು ಸಹಪಾಠಿಯೊಬ್ಬಳನ್ನು ಪ್ರೀತಿಸುತ್ತಿದ್ದೆ. ಆದರೆ, ಇತ್ತೀಚೆಗೆ ಆ ಹುಡುಗಿ ನನ್ನ ಫೋನ್ ನಂಬರ್ ಬ್ಲಾಕ್ ಮಾಡಿದ್ದಾಳೆ. ಅವಳು ಯಾವುದೇ ರೀತಿಯ ಪ್ರತಿಕ್ರಿಯೆ ನೀಡುತ್ತಿಲ್ಲ’ ಎಂದು ಷಬ್ಬೀರ್ ಬರೆದಿದ್ದಾರೆ. ಇದರಿಂದಾಗಿ ಅವರು ಮಾನಸಿಕವಾಗಿ ನೊಂದಿದ್ದರಿಂದ ಈ ಕ್ರಮ ತೆಗೆದುಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಮತ್ತಷ್ಟು ತನಿಖೆ ನಡೆಸುತ್ತಿದ್ದಾರೆ. ಸುಸೈಡ್ ನೋಟ್ ವನ್ನು ವಶಕ್ಕೆ ಪಡೆದುಕೊಂಡು, ಪ್ರಕರಣ ದಾಖಲಿಸಲಾಗಿದೆ.