ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66 ರ ಕೂಳೂರು ರಾಯಲ್ ಓಕ್ ಮುಂಭಾಗದಲ್ಲಿ ರಸ್ತೆ ಗುಂಡಿಗೆ ಸಿಲುಕಿ ಸ್ಕೂಟರ್ ನಿಂದ ಉರುಳಿ ಬಿದ್ದ ಮಹಿಳೆಯ ಮೇಲೆ ಲಾರಿ ಹರಿದು ಹೋಗಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು(ಸೆ.9) ರ ಬೆಳಗ್ಗೆ 8:30 ಗಂಟೆ ಸುಮಾರಿಗೆ ನಡೆದಿದೆ.
ಘಟನೆಯ ಪರಿಣಾಮ ಮೂಲತಃ ಮಣಿಪಾಲ ಪರ್ಕಳ ನಿವಾಸಿ ಸದ್ಯ ಚಿತ್ರಾಪುರದಲ್ಲಿ ನೆಲೆಸಿದ್ದ ಮಾಧವಿ(37) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇವರು ಎಜೆ ಆಸ್ಪತ್ರೆಯಲ್ಲಿ ಬ್ಲಡ್ ಬ್ಯಾಂಕ್ ಟೆಕ್ನಿಷಿಯನ್ ಆಗಿದ್ದು ಬೆಳಗ್ಗೆ ಕರ್ತವ್ಯಕ್ಕೆ ಹಾಜರಾಗುವಾಗ ಘಟನೆ ಸಂಭವಿಸಿದೆ. ಅಪಘಾತದ ತೀವ್ರತೆಗೆ ಅವರು ಸ್ಥಳದಲ್ಲೇ ಮೃತಪಟ್ಟಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಹೆದ್ದಾರಿ ಗುಂಡಿಯ ವಿರುದ್ಧ ಸ್ಥಳೀಯರಿಂದ ಪ್ರತಿಭಟನೆ!
ಹೆದ್ದಾರಿ ಗುಂಡಿಯಿಂದಾಗಿ ಯುವತಿ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಹೆದ್ದಾರಿ ಅಧಿಕಾರಿಗಳ ವಿರುದ್ಧ ಸುಮೋಟೋ ಪ್ರಕರಣ ದಾಖಲಿಸಬೇಕು ಎಂದು ಸ್ಥಳೀಯರು ಪ್ರತಿಭಟನೆ ನಡೆಸುತ್ತಿದ್ದಾರೆ.