ಬೆಳ್ತಂಗಡಿ: ಧರ್ಮಸ್ಥಳ ಬುರುಡೆ ಪ್ರಕರಣ ಸಂಬಂಧ ಸೆಪ್ಟೆಂಬರ್ 10ರಂದು ಸಂಜೆ 4:30 ಗಂಟೆಗೆ ಎಸ್.ಐ.ಟಿ ಅಧಿಕಾರಿಗಳು ಸ್ಥಳಮಹಜರು ನಡೆಸಿದರು.
ಎಸ್ಪಿ ಸಿ.ಎ. ಸೈಮನ್ ನೇತೃತ್ವದಲ್ಲಿ ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲಗುಡ್ಡ ಪ್ರದೇಶಕ್ಕೆ ಸೌಜನ್ಯ ಮಾವ ವಿಠಲ್ ಗೌಡ ಅವರನ್ನು ಕರೆದುಕೊಂಡು ಹೋದ ತಂಡ, ಸ್ಥಳದಲ್ಲಿಯೇ ಪರಿಶೀಲನೆ ಮತ್ತು ದಾಖಲೆ ಪರಿಶೀಲನೆ ನಡೆಸಿತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ವಿಚಾರಣೆ ಮುಂದುವರಿದಿದ್ದು, ಗಿರೀಶ್ ಮಟ್ಟಣ್ಣವರ್, ಜಯಂತ್.ಟಿ, ಯೂಟ್ಯೂಬರ್ ಅಭಿಷೇಕ್ ಮತ್ತು ಕೇರಳದ ಮುನಾಫ್ ಸೆ.10 ರಂದು ಬೆಳಗ್ಗೆ 11 ಗಂಟೆಗೆ ಎಸ್.ಐ.ಟಿ ಕಚೇರಿಗೆ ಹಾಜರಾಗಿದ್ದರು. ಇದರ ಬೆನ್ನಲ್ಲೇ ಸ್ಥಳ ಮಹಜರು ನಡೆಸಿದ್ದು, ಹಲವು ಸ್ಫೋಟಕ ಮಾಹಿತಿಗಳು ಲಭಿಸಿದೆ ಎನ್ನಲಾಗಿದೆ