ಬ್ರಹ್ಮಾವರ: ಬ್ರಹ್ಮಾವರದ ಹಿಲಿಯಾಣ ಗ್ರಾಮದ ಆಮ್ರಕಲ್ಲು ಎಂಬಲ್ಲಿ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ದೊರೆತ ಮೇರೆಗೆ ಶಂಕರನಾರಾಯಣ ಪೊಲೀಸರು ದಾಳಿ ನಡೆಸಿ ವ್ಯಕ್ತಿಯೋರ್ವನನ್ನು ಬಂಧಿಸಿದ್ದಾರೆ.
ಅಮ್ರಕಲ್ಲು ನಿವಾಸಿ, ನಾರಾಯಣ ನಾಯ್ಕ (43) ಬಂಧಿತ ಆರೋಪಿ.
ಈತ ಯಾವುದೇ ಮಾನ್ಯ ಪರವಾನಿಗೆ ಇಲ್ಲದೆ ಮದ್ಯ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ಪೊಲೀಸರು ಆತನಿಂದ “ಮೈಸೂರು ಲ್ಯಾನ್ಸರ್ ವಿಸ್ಕಿ” ಎಂದು ಲೇಬಲ್ ಮಾಡಲಾದ 70 ಟೆಟ್ರಾ ಪ್ಯಾಕ್ ಮದ್ಯ ಮತ್ತು 430 ನಗದನ್ನು ವಶಪಡಿಸಿಕೊಂಡಿದ್ದಾರೆ.
ವಶಪಡಿಸಿಕೊಂಡ ವಸ್ತುಗಳ ಒಟ್ಟು ಮೌಲ್ಯ ಸುಮಾರು 3,930 ರೂ. ಎಂದು ಅಂದಾಜಿಸಲಾಗಿದೆ. ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.