ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಆತ್ಮಹ*ತ್ಯೆ: ತನಿಖೆಯನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಸ್ವಯಂಪ್ರೇರಿತ ಬಂದ್

ಚಿಕ್ಕಮಗಳೂರು: ಕಳೆದ ಜೂನ್ 30 ರಂದು ಕೊಪ್ಪ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಹಾಸ್ಟೆಲ್ ಶೌಚಾಲಯದಲ್ಲಿ ವಿದ್ಯಾರ್ಥಿನಿ ಶಮಿತಾ ಆತ್ಮಹತ್ಯೆ ಮಾಡಿಕೊಂಡಿದ್ದು ಇದರ ತನಿಖೆಯನ್ನು ಸಿಬಿಐ ಗೆ ವಹಿಸಬೇಕೆಂದು ಆಗ್ರಹಿಸಿ ಪಟ್ಟಣದ ವಿವಿಧ ಸಂಘಟನೆಗಳು ಕೊಪ್ಪ ಪಟ್ಟಣ ಬಂದ್ ಗೆ ಕರೆ ನೀಡಿದ್ದಾರೆ.

ಕೊಪ್ಪದಲ್ಲಿರುವ ವಸತಿ ಶಾಲೆಯ ಹಾಸ್ಟೆಲ್ ಶೌಚಾಲಯದಲ್ಲಿ ಈ ಹಿಂದೆಯೂ ಓರ್ವ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೈದಿದ್ದಳು ಇದೀಗ ಅದೇ ಜಾಗದಲ್ಲಿ ಅದೇ ಶೈಲಿಯಲ್ಲಿ ಮತ್ತೋರ್ವ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದು ಪೊಲೀಸರು ನಡೆಸಿದ ತನಿಖೆಯಲ್ಲಿ ಲೋಪವಿದೆ ಹಾಗಾಗಿ ಈ ಪ್ರಕರಣದ ತನಿಖೆಯನ್ನು ಸಿಬಿಐ ಗೆ ವಹಿಸುವಂತೆ ವಿವಿಧ ಸಂಘಟನೆಗಳು ಆಗ್ರಹಿಸಿ ಇಂದು ಕೊಪ್ಪ ಪಟ್ಟಣ ಬಂದ್ ಗೆ ಕರೆ ನೀಡಿದೆ.

error: Content is protected !!