ಕಲಬುರಗಿ: ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಚಿಂಚನಸೂರು ಗ್ರಾಮದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ.
ಇಂದು (ಸೆಪ್ಟೆಂಬರ್ 11) ಬೆಳಗ್ಗೆ 8 ಗಂಟೆ 17 ನಿಮಿಷದ ಸುಮಾರಿಗೆ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 2.3ರಷ್ಟು ಕಂಪನದ ತೀವ್ರತೆ ದಾಖಲಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಗ್ರಾಮಕ್ಕೆ ಗ್ರಾಮಕ್ಕೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗ್ರಾಮಸ್ಥರ ಜೊತೆ ಸಭೆ ನಡೆಸಿ ಸಣ್ಣ ಪ್ರಮಾಣದಲ್ಲಿ ಭೂಮಿ ಕಂಪಿಸಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.
ಅಲ್ಲದೇ ಇದರಿಂದ ಯಾರೂ ಕೂಡ ಆತಂಕಕ್ಕೆ ಒಳಗಾಗದಂತೆ ಗ್ರಾಮಸ್ಥರಿಗೆ ಧೈರ್ಯ ಹೇಳಿದ್ದಾರೆ.