ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು(ಸೆ. 11) ಸ್ವಾಮಿ ವಿವೇಕಾನಂದರ ಚಿಕಾಗೋ ಭಾಷಣದ ಐತಿಹಾಸಿಕ ಪ್ರಾಮುಖ್ಯತೆಯನ್ನು ಎಕ್ಸ್ ಮೂಲಕ ಸ್ಮರಿಸಿದ್ದಾರೆ.
ಪ್ರಧಾನಿ ಮೋದಿ ಅವರ ಪೋಸ್ಟ್‌ನಲ್ಲಿ, 1893ರ ಈ ದಿನದಂದು ಸ್ವಾಮಿ ವಿವೇಕಾನಂದರು ಚಿಕಾಗೋದಲ್ಲಿ ಮಾಡಿದ ಭಾಷಣವನ್ನು “ನಮ್ಮ ಇತಿಹಾಸದ ಅತ್ಯಂತ ಸ್ಪೂರ್ತಿದಾಯಕ ಕ್ಷಣ” ಎಂದು ಹೇಳಿದ್ದಾರೆ. “ಸ್ವಾಮಿ ವಿವೇಕಾನಂದರ ಚಿಕಾಗೋ ಭಾಷಣವು ಭಾರತದ ಆಧ್ಯಾತ್ಮಿಕ ಹಾಗೂ ಸಾಂಸ್ಕೃತಿಕ ವೈಭವವನ್ನು ವಿಶ್ವಕ್ಕೆ ಪರಿಚಯಿಸಿತು. ಸಾಮರಸ್ಯ ಮತ್ತು ಸಹೋದರತ್ವದ ಸಂದೇಶವನ್ನು ಅವರು ಜಗತ್ತಿಗೆ ನೀಡಿದರು” ಎಂದು ಬರೆದಿದ್ದಾರೆ. ಈ ಭಾಷಣವನ್ನು ವಿಶ್ವದ ಅತ್ಯಂತ ಪ್ರಭಾವಶಾಲಿ ಭಾಷಣಗಳಲ್ಲಿ ಒಂದಾಗಿದೆ ಎಂದು ಹೇಳಿದರು.
132 ವರ್ಷಗಳ ಹಿಂದೆ ನೀಡಿದ ಈ ಭಾಷಣದಲ್ಲಿ ಸ್ವಾಮಿ ವಿವೇಕಾನಂದರು ವಿಭಜನೆ ಮತ್ತು ಅಸಹಿಷ್ಣುತೆಯ ವಿರುದ್ಧ ಬೋಧಿಸಿದ್ದರು. ಪ್ರಧಾನಿ ಮೋದಿ ಅವರು ಇದರ ಪ್ರಸ್ತುತತೆಯನ್ನು ಒತ್ತಿಹೇಳಿ, “ಇಂದಿಗೂ ಈ ಸಂದೇಶ ಪ್ರಸ್ತುತವಾಗಿದೆ” ಎಂದು ತಿಳಿಸಿದ್ದಾರೆ. ಭಾರತೀಯ ದರ್ಶನ ಮತ್ತು ಸಂಸ್ಕೃತಿಯ ಮಹತ್ವವನ್ನು ಜಗತ್ತಿಗೆ ತಲುಪಿಸಿದ ಈ ಘಟನೆಯನ್ನು ದೇಶದಾದ್ಯಂತ ಸ್ಮರಿಸಲಾಗುತ್ತಿದೆ.