ಬೆಳ್ತಂಗಡಿ: ಧರ್ಮಸ್ಥಳ ಗ್ರಾಮಕ್ಕೆ ಸೇರಿದ ವಿವಿಧ ವಸತಿಗೃಹಗಳಲ್ಲಿ 2006-2010ರಲ್ಲಿ ಸಂಭವಿಸಿದ ನಾಲ್ಕು “ಅಪರಿಚಿತ ಸಾವುಗಳು” ಸಂಭಾವ್ಯ ಕೊಲೆ ಪ್ರಕರಣಗಳಾಗಿರುವುದರಿಂದ ವಿಶೇಷ ತನಿಖಾ ದಳ (SIT) ತಕ್ಷಣ ಎಫ್‌ಐಆರ್ ದಾಖಲಿಸಿ ತನಿಖೆ ಮಾಡುವಂತೆ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಎಸ್ಐಟಿ ಕಚೇರಿಗೆ ತೆರಳಿ ದೂರು ನೀಡಿದ್ದಾರೆ.
ಮಹೇಶ್ ಶೆಟ್ಟಿ ತಿಮರೋಡಿ ನೀಡಿರುವ ದೂರಿನಲ್ಲಿ ಗಾಯತ್ರಿ, ಶಾರಾವತಿ ಮತ್ತು ವೈಶಾಲಿ ವಸತಿ ಗೃಹಗಳಲ್ಲಿ ನಡೆದ ನಾಲ್ಕು ಸಾವುಗಳನ್ನು ಪ್ರಸ್ತಾಪಿಸಲಾಗಿದ್ದು, ಇವುಗಳನ್ನು “ಅಪರಿಚಿತ ಶವ”ಗಳೆಂದು ಘೋಷಿಸಿ ಗ್ರಾಮ ಪಂಚಾಯತ್ ಮೂಲಕ ತರಾತುರಿಯಲ್ಲಿ ಸಮಾಧಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ಕೊಲೆ ಅಥವಾ ಆತ್ಮಹತ್ಯೆಯ ಸಂಶಯ ಇದ್ದರೂ ಎಫ್.ಐ.ಆರ್ ದಾಖಲಿಸದೆ ಕೇವಲ ಯುಡಿಆರ್ ದಾಖಲಾಗಿರುವುದು ಅನುಮಾನಸ್ಪದವಾಗಿದೆ ಎಂದು ತಿಮರೋಡಿ ದೂರಿನಲ್ಲಿ ತಿಳಿಸಿದ್ದಾರೆ.