ಮೂಡುಬಿದಿರೆ: ಯುವತಿಯನ್ನು ಮದುವೆಯಾಗುತ್ತೇನೆಂದು ನಂಬಿಸಿ, ದೈಹಿಕ ಸಂಬಂಧ ಬೆಳೆಸಿ, ಜಾತಿಯ ನೆಪ ಹೇಳಿ ಮದುವೆಗೆ ನಿರಾಕರಿಸಿದ ಫೋಟೋಗ್ರಾಫರ್ ನನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.
ಉಪ್ಪಿನಂಗಡಿ ಬೆದ್ರೋಡಿಯ ನಿವಾಸಿ, ಮೂಡುಬಿದಿರೆ ಕಲ್ಲಬೆಟ್ಟುವಿನ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಸಂಕೇತ್ ಗಾಣಿಗ (31) ಬಂಧಿತ ಆರೋಪಿ.
ಇನ್ಸ್ಟಾಗ್ರಾಮ್ ಮೂಲಕ ಯುವತಿಯೊಂದಿಗೆ ಸ್ನೇಹ ಬೆಳೆಸಿದ ಆರೋಪಿ, ಅವಳೊಂದಿಗೆ ದೈಹಿಕ ಸಂಬಂಧ ಹೊಂದಿದ್ದು, ನಂತರ ಜಾತಿಯ ನೆಪ ಹೇಳಿ ಮದುವೆಗೆ ನಿರಾಕರಿಸಿದ್ದಾನೆ ಎನ್ನಲಾಗಿದೆ.
ಪೀಡಿತೆ ಮೂಡುಬಿದಿರೆ ಪೊಲೀಸ್ ಠಾಣೆಗೆ ದೂರು ನೀಡಿದ ನಂತರ, ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ. ಆರೋಪಿಯ ವಿರುದ್ಧ ದಲಿತ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಆರೋಪಿಯನ್ನು ಬಂಧಿಸಿದ್ದಾರೆ.